ವರದಕ್ಷಿಣೆ ಕಿರುಕುಳ: ನಿರ್ದೇಶಕ ಎಸ್. ನಾರಾಯಣ್ ಮತ್ತು ಕುಟುಂಬದ ವಿರುದ್ಧ 'FIR'..!
ಬೆಂಗಳೂರು ನಗರದಲ್ಲಿನ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಖ್ಯಾತ ಚಿತ್ರ ನಿರ್ದೇಶಕ ಎಸ್. ನಾರಾಯಣ್, ಅವರ ಪತ್ನಿ ಭಾಗ್ಯಲಕ್ಷ್ಮಿ ಮತ್ತು ಪುತ್ರ ಪವನ್ ವಿರುದ್ಧ ವರದಕ್ಷಿಣೆ ಕಿರುಕುಳ ಪ್ರಕರಣ ದಾಖಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್. ನಾರಾಯಣ್ ಅವರ ಎರಡನೇ ಮಗನ ಪತ್ನಿ ಪವಿತ್ರಾ ದೂರು ದಾಖಲಿಸಿದ್ದಾರೆ.
ಮದುವೆಯಲ್ಲಿ ವರದಕ್ಷಿಣೆ ನೀಡಿದ್ದರೂ ಹೆಚ್ಚುವರಿ ಹಣಕ್ಕಾಗಿ ಒತ್ತಾಯ ಮಾಡಲಾಗಿದೆ ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ. ಜೊತೆಗೆ, ತನ್ನ ಮೇಲೆ ಹಲ್ಲೆ ನಡೆಸಿ ನಿರಂತರವಾಗಿ ವರದಕ್ಷಿಣೆ ಕಿರುಕುಳ ನೀಡಿದ್ದಾರೆ ಎಂಬ ಗಂಭೀರ ಆರೋಪವನ್ನೂ ಮಾಡಿದ್ದಾರೆ.
ದೂರಿನಲ್ಲಿ ಏನಿದೆ?
ನಾನು ಹಾಗೂ ಎಸ್.ನಾರಾಯಣ್ ಪುತ್ರ ಪವನ್ 2021ರಲ್ಲಿ ಮದುವೆಯಾದೆವು. ಪವನ್ ಓದಿರದ ಕಾರಣ ಕೆಲಸ ಇಲ್ಲದೆ ಮನೆಯಲ್ಲಿಯೇ ಇದ್ದರು. ಇದರಿಂದಾಗಿ ನಾನೇ ಕೆಲಸಕ್ಕೆ ಹೋಗಿ ಮನೆ ಸಾಗಿಸುತ್ತಿದ್ದೆ. ನಂತರ ಪವನ್ ಕಲಾ ಸಾಮ್ರಾಟ್ ಟೀಂ ಅಕಾಡೆಮಿ ಎಂಬ ಫಿಲ್ಮ್ ಇನ್ಸ್ಟಿಟ್ಯೂಟ್ ಪ್ರಾರಂಭಿಸಬೇಕೆಂದು ಯೋಚಿಸಿದ್ದರು. ಇದಕ್ಕಾಗಿ ನನ್ನ ಬಳಿ ದುಡ್ಡು ಕೇಳಿದ್ದರು. ಆಗ ನನ್ನ ತಾಯಿಯ ಒಡವೆ ಕೊಟ್ಟಿದ್ದೆ. ಆದ್ರೆ ಬಳಿಕ ಲಾಸ್ ಆಗಿ ಇನ್ಸ್ಟಿಟ್ಯೂಟ್ ಮುಚ್ಚಬೇಕಾದ ಪರಿಸ್ಥಿತಿ ಬಂತು.
ಮದುವೆಯಲ್ಲಿ 1 ಲಕ್ಷ ರೂ. ಮೌಲ್ಯದ ಉಂಗುರ ಹಾಗೂ ಮದುವೆ ಖರ್ಚು ನೋಡಿಕೊಂಡಿದ್ದೆವು. ವರದಕ್ಷಿಣೆ ಕೊಟ್ರೂ ಹಲ್ಲೆ ನಡೆಸಿ ಹೆಚ್ಚಿನ ಹಣಕ್ಕೆ ಒತ್ತಾಯಿಸಿದ್ದಾರೆ. ಹೀಗಾಗಿ ಜಗಳ ಆಗಿ ನನ್ನನ್ನು ಮನೆಯಿಂದ ಆಚೆ ಹಾಕಿದ್ದರು. ಇದರಿಂದ ನನಗೆ ಹಾಗೂ ನನ್ನ ಮಗನಿಗೆ ತೊಂದರೆಯಾಗುತ್ತೆ, ಒಂದು ವೇಳೆ ಏನಾದರೂ ಆದರೆ ಇವರುಗಳೇ ಕಾರಣ ಎಂದು ಆರೋಪಿಸಿ, ಕ್ರಮಕ್ಕಾಗಿ ಮನವಿ ಮಾಡಿಕೊಂಡಿದ್ದಾರೆ. ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದು, ಮುಂದಿನ ತನಿಖೆ ನಡೆಸುತ್ತಿದ್ದಾರೆ.
ನಿಮ್ಮ ಪ್ರತಿಕ್ರಿಯೆ ಏನು?