ವಾಲ್ಮೀಕಿ ಬಹುಕೋಟಿ ಹಗರಣ ಕೇಸ್: ಪ್ರಕರಣದ ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್ ಹೇಳಿದ್ದೇನು!?

ಬೆಂಗಳೂರು:- ವಾಲ್ಮೀಕಿ ಬಹುಕೋಟಿ ಹಗರಣ ಕೇಸ್ ಗೆ ಸಂಬಂಧಿಸಿದಂತೆ ಪ್ರಕರಣದ ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್ ನಕಾರ ಎತ್ತಿದೆ. ಪ್ರಕರಣದ ತನಿಖೆ ನಡೆಸಿದ ನ್ಯಾ. ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ, ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ವಜಾಗೊಳಿಸಿ ಆದೇಶ ಹೊರಡಿಸಿದೆ.
ಬ್ಯಾಂಕಿಂಗ್ ನಿಯಂತ್ರಣ ಅಧಿನಿಯಮ ಸೆಕ್ಷನ್ 35 ಎ ಅಡಿಯ ವ್ಯಾಖ್ಯಾನ ಪರಿಗಣಿಸಿ ಸಿಬಿಐ ತನಿಖೆಗೆ ವಹಿಸಲಾಗುವುದಿಲ್ಲ. ಒಂದು ವೇಳೆ ಅನುಮತಿ ನೀಡಿದರೆ ಎಲ್ಲಾ ಬ್ಯಾಂಕ್ಗಳೂ ಇದನ್ನೇ ಕೇಳಬಹುದು. ಆಗ ದೆಹಲಿ ಸ್ಪೆಷಲ್ ಪೊಲೀಸ್ ಎಸ್ಟಾಬ್ಲಿಷ್ಮೆಂಟ್ ಆ್ಯಕ್ಟ್ ನಿರರ್ಥಕವಾಗಬಹುದು ಎಂದು ಅರ್ಜಿ ತಿರಸ್ಕರಿಸಿ ನ್ಯಾ. ಎಂ. ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ಅಭಿಪ್ರಾಯ ಪಟ್ಟಿದೆ.
ನಿಮ್ಮ ಪ್ರತಿಕ್ರಿಯೆ ಏನು?






