ವಾಹನ ತಪಾಸಣೆ ವೇಳೆ ಪೊಲೀಸರಿಗೆ ಗುದ್ದಿದ ಸ್ಕಾರ್ಪಿಯೋ ಕಾರು: ಮಹಿಳಾ ಕಾನ್ಸ್ಟೆಬಲ್ ಸಾವು..ಇಬ್ಬರು ಗಂಭೀರ!

ಪಾಟ್ನಾ:- ವಾಹನ ತಪಾಸಣೆ ವೇಳೆ ಸ್ಕಾರ್ಪಿಯೋ ಕಾರೊಂದು ಪೊಲೀಸರಿಗೆ ಗುದ್ದಿದ ಪರಿಣಾಮ ಮಹಿಳಾ ಕಾನ್ಸ್ಟೆಬಲ್ ಸಾವನ್ನಪ್ಪಿರುವ ಘಟನೆ ಪಾಟ್ನಾದ ಅಟಲ್ ಪಥ್ನಲ್ಲಿ ಜರುಗಿದೆ. ಘಟನೆಯಲ್ಲಿ ಇಬ್ಬರಿಗೆ ಗಂಭೀರ ಗಾಯಗಳಾಗಿದೆ.
ಪಾಟ್ನಾದ ಶ್ರೀಕೃಷ್ಣ ಪುರಿ ಪ್ರದೇಶದ ಅಟಲ್ ಪಥ್ನಲ್ಲಿ ಗಸ್ತಿನಲ್ಲಿದ್ದ ಪೊಲೀಸರ ತಂಡ ವಾಹನ ತಪಾಸಣೆ ನಡೆಸುತ್ತಿತ್ತು. ಕಾರು ತಪಾಸಣೆ ನಡೆಸುವ ವೇಳೆ ವೇಗವಾಗಿ ಬಂದ ಮತ್ತೊಂದು ಕಾರು ತಪಾಸಣೆ ನಡೆಸುತ್ತಿದ್ದ ವಾಹನಕ್ಕೆ ಡಿಕ್ಕಿ ಹೊಡೆಡಿದೆ. ಪರಿಣಾಮ ಕಾನ್ಸ್ಟೆಬಲ್ ಇಬ್ಬರು ಅಧಿಕಾರಿಗಳು ಗಾಯಗೊಂಡಿದ್ದಾರೆ.
ಗಾಯಗೊಂಡ ಪೊಲೀಸರನ್ನ ತಕ್ಷಣ ಹತ್ತಿರದ ಆಸ್ಪತ್ರೆಗೆ ಸಾಗಿಸಲಾಯಿತು. ಆದ್ರೆ ಚಿಕಿತ್ಸಾ ಸಮಯದಲ್ಲಿ ಮಹಿಳಾ ಕಾನ್ಸ್ಟೆಬಲ್ ಸಾವನ್ನಪ್ಪಿದ್ದಾರೆ. ಉಳಿದ ಇಬ್ಬರು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಪೋಲಿಸ್ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.
ನಿಮ್ಮ ಪ್ರತಿಕ್ರಿಯೆ ಏನು?






