ವಾಹನ ಮಾಲೀಕರಿಗೆ ಗುಡ್ ನ್ಯೂಸ್: HSRP ನಂಬರ್ ಪ್ಲೇಟ್ ಅಳವಡಿಕೆ ಗಡುವು ಮತ್ತೆ ವಿಸ್ತರಣೆ

ಡಿಸೆಂಬರ್ 3, 2024 - 09:20
 0  12
ವಾಹನ ಮಾಲೀಕರಿಗೆ ಗುಡ್ ನ್ಯೂಸ್: HSRP ನಂಬರ್ ಪ್ಲೇಟ್ ಅಳವಡಿಕೆ ಗಡುವು ಮತ್ತೆ ವಿಸ್ತರಣೆ

ಬೆಂಗಳೂರು: ನ್ನೂ ತಮ್ಮ ತಮ್ಮ ವಾಹನಗಳಿಗೆ ಹೈ ಸೆಕ್ಯುರಿಟಿ ರಿಜಿಸ್ಟ್ರೇಷನ್‌ ಪ್ಲೇಟ್‌ ಅಳವಡಿಕೆ ಮಾಡದ ವಾಹನ ಸವಾರರಿಗೆ ರಾಜ್ಯ ಸರ್ಕಾರ ಗುಡ್​ ನ್ಯೂಸ್ ನೀಡಿದೆ. ಈಗಾಗಲೇ ರಾಜ್ಯ ಸರ್ಕಾರ, HSRP ಕೊನೆ ದಿನಾಂಕವನ್ನು ವಿಸ್ತರಿಸುತ್ತಾ ಬಂದಿದೆ. ಇದೀಗ ಮತ್ತೆ ಹಳೆಯ ನಂಬರ್‌ ಪ್ಲೇಟ್‌ಗಳಿಗೆ ಹೈ ಸೆಕ್ಯುರಿಟಿ ರಿಜಿಸ್ಟ್ರೇಷನ್‌ ಪ್ಲೇಟ್‌ ಅಳವಡಿಸಲು ಗಡುವು ವಿಸ್ತರಣೆ ಮಾಡಿದೆ.

ಹೌದು ರಾಜ್ಯ ಸರ್ಕಾರದಿಂದ ಆದೇಶ ಹೊರಡಿಸಲಾಗಿದ್ದು,HSRP ನಂಬರ್ ಪ್ಲೇಟ್ ಗಳನ್ನು ಮಾಲೀಕರು ತಮ್ಮ ತಮ್ಮ ವಾಹನಗಳಿಗೆ ಅಳವಡಿಸಿಕೊಳ್ಳಲು ಈ ಹಿಂದೆ ಆಗಸ್ಟ್ 17ರವರೆಗೆ ಅವಕಾಶ ನೀಡಲಾಗಿತ್ತು.ಆ ನಂತರ ಈ ಅವಧಿಯನ್ನು ದಿನಾಂಕ ನವೆಂಬರ್ 30ರವರೆಗೆ ವಿಸ್ತರಿಸಲಾಗಿತ್ತು.

ಆ ನಂತರ ಮತ್ತೆ ಇತ್ತೀಚೆಗಷ್ಟೇ ಹೈಕೋರ್ಟ್ ಡಿಸೆಂಬರ್ 3ರ ವರೆಗೆ ಗಡುವು ನೀಡಿತ್ತು. ಇದೀಗ ಹೈ ಸೆಕ್ಯುರಿಟಿ ರಿಜಿಸ್ಟ್ರೇಶನ್ ಪ್ಲೇಟ್ ನೋಂದಣಿಯ ಕೊನೆಯ ದಿನಾಂಕವನ್ನು 2024ರ ಡಿಸೆಂಬರ್ 31ರ ವರೆಗೆ ವಿಸ್ತರಣೆ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಮೂಲಕ 5ನೇ ಬಾರಿಗೆ ಗಡುವು ವಿಸ್ತರಿಸಲಾಗಿದೆ.        

ಹೆಚ್.ಎಸ್.ಆರ್.ಪಿ ಅಳವಡಿಕೆಯ ಕಾರ್ಯವಿಧಾನ

  • https://transport.karnataka.gov.in ಅಥವಾ www.siam.in ಭೇಟಿ ನೀಡಿ ಮತ್ತು Book HSRP ನ್ನು ಕ್ಲಿಕ್ ಮಾಡಿ.
  • ನಿಮ್ಮ ವಾಹನ ತಯಾರಕರನ್ನು ಆಯ್ಕೆಮಾಡಿ.
  • ವಾಹನದ ಮೂಲ ವಿವರಗಳನ್ನು ಭರ್ತಿ ಮಾಡಿ.
  • HSRP ಅಳವಡಿಕೆಗಾಗಿ ನಿಮ್ಮ ಅನುಕೂಲಕ್ಕೆ ತಕ್ಕಂತೆ ಡೀಲರ್ ಸ್ಥಳವನ್ನು ಆಯ್ಕೆಮಾಡಿ.
  • HSRP ಶುಲ್ಕವನ್ನು ಆನ್‌ಲೈನ್‌ನಲ್ಲಿ ಪಾವತಿಸಿ. ಶುಲ್ಕ ಪಾವತಿಯನ್ನು ನಗದು ರೂಪದಲ್ಲಿ ಮಾಡುವಂತಿಲ್ಲ.
  • ವಾಹನ ಮಾಲೀಕರ ಮೊಬೈಲ್ ಸಂಖ್ಯೆಗೆ ಒಟಿಪಿ ರವಾನಿಸಲಾಗುವುದು.
  • ನಿಮ್ಮ ಅನುಕೂಲಕ್ಕೆ, ತಕ್ಕಂತೆ HSRP ಅಳವಡಿಕೆಯ ದಿನಾಂಕ ಮತ್ತು ಸಮಯವನ್ನು ಆಯ್ಕೆಮಾಡಿ.
  • ನಿಮ್ಮ ವಾಹನದ ಯಾವುದೇ ತಯಾರಕ/ಡೀಲರ್ ಸಂಖ್ಯೆಗೆ ಭೇಟಿ ನೀಡಿ.
  • ವಾಹನ ಮಾಲೀಕರ ಕಚೇರಿ ಆವರಣ/ಮನೆಯ ಸ್ಥಳದಲ್ಲಿ HSRP ಅಳವಡಿಕೆಗಾಗಿ ಆಯ್ಕೆ ಮಾಡಬಹುದು.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow