ವಾಹನ ಸವಾರರಿಗೆ ಗುಡ್ ನ್ಯೂಸ್: HSRP ನಂಬರ್ ಪ್ಲೇಟ್ ಅಳವಡಿಕೆ ಗಡುವು ಮತ್ತೆ ವಿಸ್ತರಿಸಿದ ಸರ್ಕಾರ!

ಬೆಂಗಳೂರು:- ವಾಹನ ಸವಾರರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, HSRP ನಂಬರ್ ಪ್ಲೇಟ್ ಅಳವಡಿಕೆ ಗಡುವು ಮತ್ತೆ ವಿಸ್ತರಿಸಿ ಸರ್ಕಾರ ಆದೇಶ ಹೊರಡಿಸಿದೆ.
ಈ ತಿಂಗಳು ಕೊನೆ ಅಂದರೆ ಜನವರಿ 31ರವರೆಗೆ ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಸಮಯ ನೀಡಿ ರಾಜ್ಯ ಸಾರಿಗೆ ಇಲಾಖೆ ಆದೇಶ ಹೊರಡಿಸಿದೆ.
ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಕೆಗೆ 6 ಬಾರಿ ಸಮಯ ವಿಸ್ತರಿಸಿದರೂ ಸಹ ವಾಹನ ಮಾಲೀಕರು ತಮ್ಮ ವಾಹನಕ್ಕೆ ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಸಿಕೊಂಡಿಲ್ಲ. ಹೀಗಾಗಿ, ರಾಜ್ಯ ಸಾರಿಗೆ ಇಲಾಖೆ ಮತ್ತೊಂದು ಅವಕಾಶ ನೀಡಿದೆ.
ಹೈಸೆಕ್ಯೂರಿಟಿ ನಂಬರ್ ಪ್ಲೇಟ್ ಅಳವಡಿಕೆಗೆ ಈಗಾಗಲೇ ಅವಧಿ ಮುಗಿದಿದ್ದರೂ ಸಹ ರಾಜ್ಯ ಸಾರಿಗೆ ಇಲಾಖೆ ವಾಹನ ಮಾಲೀಕರಿಗೆ ಮತ್ತೆ ಮತ್ತೆ ಅವಕಾಶ ನೀಡುತ್ತಲೇ ಇದೆ. ಬರೊಬ್ಬರಿ ಆರು ಬಾರಿ ಗಡುವು ವಿಸ್ತರಿಸಿದೆ. 2019ಕ್ಕೂ ಮೊದಲು ನೋಂದಣಿಯಾದ ವಾಹನಗಳಿಗೆ ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಕೆ ಮಾಡಿಕೊಳ್ಳಬೇಕು ಎನ್ನಲಾಗಿದೆ.
ನಿಮ್ಮ ಪ್ರತಿಕ್ರಿಯೆ ಏನು?






