ವಾಹನ ಸವಾರರಿಗೆ ಗುಡ್ ನ್ಯೂಸ್: ಹೆಚ್ಎ​ಸ್​ಆರ್​ಪಿ ನಂಬರ್​ ಪ್ಲೇಟ್ ಅಳವಡಿಕೆ ಗಡುವು ವಿಸ್ತರಿಸಿದ ಸರ್ಕಾರ!

ಫೆಬ್ರವರಿ 25, 2025 - 08:05
 0  9
ವಾಹನ ಸವಾರರಿಗೆ ಗುಡ್ ನ್ಯೂಸ್: ಹೆಚ್ಎ​ಸ್​ಆರ್​ಪಿ ನಂಬರ್​ ಪ್ಲೇಟ್ ಅಳವಡಿಕೆ ಗಡುವು ವಿಸ್ತರಿಸಿದ ಸರ್ಕಾರ!

ಬೆಂಗಳೂರು:- ವಾಹನ ಸವಾರರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಹೆಚ್ಎ​ಸ್​ಆರ್​ಪಿ ನಂಬರ್​ ಪ್ಲೇಟ್ ಅಳವಡಿಕೆ ಗಡುವು ವಿಸ್ತರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 

ಮಾರ್ಚ್​ 31ರವರೆಗೆ ಗಡುವು ವಿಸ್ತರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈವರೆಗೆ 6 ಬಾರಿ ಹೆಚ್​ಎಸ್​ಆರ್​ಪಿ ನಂಬರ್​​ ಪ್ಲೇಟ್ ಅಳವಡಿಕೆಗೆ ಗಡುವು ವಿಸ್ತರಣೆಯಾಗಿದೆ. ಕರ್ನಾಟಕದಲ್ಲಿ ಸುಮಾರು 2 ಕೋಟಿಯಷ್ಟು ಹಳೆಯ ವಾಹನಗಳಿವೆ. ಇದರಲ್ಲಿ 58 ಲಕ್ಷ ವಾಹನಗಳಿಗೆ ಹೆಚ್​ಎಸ್​ಆರ್​ಪಿ ನಂಬರ್ ಪ್ಲೇಟ್ ಅಳವಡಿಕೆಯಾಗಿವೆ. 2019ರ ಏಪ್ರಿಲ್​ 1ರ ಹಿಂದಿನ ಎಲ್ಲ ವಾಹನಗಳಿಗೆ ಹೆಚ್​ಎಸ್​ಆರ್​ಪಿ ನಂಬರ್ ಪ್ಲೇಟ್​ ಅಳವಡಿಸಿಕೆ ಕಡ್ಡಾಯವಾಗಿದೆ.

ಭದ್ರತೆ ಹಾಗೂ ಸುರಕ್ಷತೆಯ ದೃಷ್ಟಿಯಿಂದ ಮೋಟಾರು ವಾಹನ ಕಾಯ್ದೆ-1989 ಸೆಕ್ಷನ್‌ 50 ಹಾಗೂ 51 ಅನ್ವಯ ಎಲ್ಲಾ ವಾಹನಗಳಿಗೆ ಗರಿಷ್ಠ ಭದ್ರತೆಯ ನಂಬರ್‌ ಪ್ಲೇಟ್‌ಗಳನ್ನು ಅಳವಡಿಸಬೇಕಿದೆ. ಹೆಚ್‌ಎಸ್ಆರ್‌ಪಿ ನಂಬರ್ ಪ್ಲೇಟ್ ಎಂದರೆ ಹೈ ಸೆಕ್ಯೂರಿಟಿ ರಿಜಿಸ್ಟ್ರೇಶನ್ ಪ್ಲೇಟ್ ಎಂದರ್ಥ. ಕರ್ನಾಟಕದ ವಾಹಗಳಿಗೆ ಇದನ್ನು ಕಡ್ಡಾಯಗೊಳಿಸಲಾಗಿದೆ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow