ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಸಿಬ್ಬಂದಿ: ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ - ಸಚಿವ ಡಾ. ಎಂಸಿ ಸುಧಾಕರ್

ಎಪ್ರಿಲ್ 18, 2025 - 12:00
 0  13
ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಸಿಬ್ಬಂದಿ: ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ - ಸಚಿವ ಡಾ. ಎಂಸಿ ಸುಧಾಕರ್

ಬೆಂಗಳೂರು: ಸಿಇಟಿ ಪರೀಕ್ಷೆ ಬರೆಯಲು ತೆರಳಿದ್ದ ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಪರೀಕ್ಷಾ ಕೇಂದ್ರದ ಸಿಬ್ಬಂದಿ ತೆಗೆಸಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಈ ಘಟನೆಯನ್ನು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಮತ್ತು ವಿವಿಧ ಬ್ರಾಹ್ಮಣ ಸಂಘಗಳು ತೀವ್ರವಾಗಿ ಖಂಡಿಸಿವೆ. ಇನ್ನೂ ಈ ವಿಚಾರವಾಗಿ ಉನ್ನತ ಶಿಕ್ಷಣ ಸಚಿವ ಡಾ. ಎಂಸಿ ಸುಧಾಕರ್ ಪ್ರತಿಕ್ರಿಯೆ ನೀಡಿದ್ದು,

ಸಿಇಟಿ ಅಭ್ಯರ್ಥಿಯ ಜನಿವಾರ ತೆಗೆಸಿದ್ದು ನಿಜವೇ ಆದರೆ ಅದು ಅತಿರೇಕದ ವರ್ತನೆ. ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ. ಯಾವುದೇ ಕೇಂದ್ರದಲ್ಲಿ ಆ ರೀತಿ ಆಗಿದ್ದರೆ ಗಂಭೀರವಾಗಿ ಪರಿಗಣಿಸುತ್ತೇವೆ ಎಂದು ಅವರು ಹೇಳಿದ್ದಾರೆ.

ಎಲ್ಲಾ ಜಾತಿ, ಧರ್ಮಗಳ ಆಚರಣೆ ಸಂಪ್ರದಾಯಕ್ಕೆ ಗೌರವ ಕೊಡಬೇಕು. ನಾನು ಈ ರೀತಿಯ ಘಟನೆಗಳಿಗೆಲ್ಲ ಪ್ರೋತ್ಸಾಹ ಕೊಡುವುದಿಲ್ಲ. ಘಟನೆ ಸಂಬಂಧ ಅಧಿಕಾರಿಗಳ ಬಳಿ ವರದಿ ಪಡೆದು, ಮುಂದೆ ಏನು ಮಾಡಬಹುದು ಎಂದು ಯೋಚಿಸುತ್ತೇನೆ.

ಆ ರೀತಿ ಆಗಿದ್ದು ಸತ್ಯವೇ ಆದರೆ ಇನ್ನೊಮ್ಮೆ ಪರಿಶೀಲನೆ ಮಾಡುತ್ತೇನೆ. ಆಯ್ದ ವಿಚಾರ ಎತ್ತಿಕೊಂಡು ರಾಜಕೀಯ ಲಾಭ ಮಾಡುವುದಲ್ಲ. ಯಾವುದೇ ಸಮುದಾಯವನ್ನು ನೋವಿಸುವ ಉದ್ದೇಶ ನಮ್ಮದಲ್ಲ ಎಂದು ಹೇಳಿದ್ದಾರೆ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow