ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ: ಚೈತನ್ಯಾನಂದ ಸರಸ್ವತಿ ಸ್ವಾಮೀಜಿ ಜಾಮೀನು ಅರ್ಜಿ ವಜಾ

ಸೆಪ್ಟೆಂಬರ್ 26, 2025 - 18:04
 0  14
ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ: ಚೈತನ್ಯಾನಂದ ಸರಸ್ವತಿ ಸ್ವಾಮೀಜಿ ಜಾಮೀನು ಅರ್ಜಿ ವಜಾ

ದೆಹಲಿಯ ಪ್ರತಿಷ್ಠಿತ ಸಂಸ್ಥೆ ಶ್ರೀ ಶಾರದಾ ಇನ್​​ಸ್ಟಿಟ್ಯೂಟ್ ಆಫ್ ಇಂಡಿಯನ್ ಮ್ಯಾನೇಜ್​​ಮೆಂಟ್ ನಿರ್ದೇಶಕ ​​ಚೈತನ್ಯಾನಂದ ಸರಸ್ವತಿ ಸ್ವಾಮೀಜಿ ವಿದ್ಯಾರ್ಥಿನಿಯರಿಗೆ ನೀಡಿರುವ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿಯ ಪಟಿಯಾಲ ಹೌಸ್ ಕೋರ್ಟ್‌ಗೆ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡಿದೆ.

ದೆಹಲಿಯ ವಸಂತ್ ಕುಂಜ್‌ನಲ್ಲಿರುವ ಖಾಸಗಿ ನಿರ್ವಹಣಾ ಸಂಸ್ಥೆಯ ಹಲವು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದಾರೆ. ಆರೋಪಿ ಸ್ವಾಮಿ ಈ ಹಿಂದೆ ಪಾರ್ಥಸಾರಥಿ ಎಂದು ಕರೆಯಲ್ಪಡುತ್ತಿದ್ದರು , ಶ್ರೀ ಶಾರದಾ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯನ್ ಮ್ಯಾನೇಜ್‌ಮೆಂಟ್-ರಿಸರ್ಚ್‌ನ ನಿರ್ದೇಶಕರಾಗಿದ್ದರು.

ಆಗಸ್ಟ್ 2025ರಲ್ಲಿ ಒಟ್ಟು 17 ವಿದ್ಯಾರ್ಥಿನಿಯರು ಸಾಮೂಹಿಕವಾಗಿ ಲೈಂಗಿಕ ಕಿರುಕುಳದ ವಿರುದ್ಧ ದೂರು ಸಲ್ಲಿಸಿದ್ದಾರೆ. ಚೈತನ್ಯಾನಂದ ಹಾಸ್ಟೆಲ್‌ನ ಬಹುತೇಕ ಭಾಗಗಳಲ್ಲಿ, ವಿಶೇಷವಾಗಿ ಸ್ನಾನಗೃಹಗಳ ಸುತ್ತಲೂ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಿದ್ದ ಎಂಬ ಗಂಭೀರ ಆರೋಪವೂ ಕೇಳಿಬಂದಿದೆ. ಈ ದೃಶ್ಯಗಳನ್ನು ದುರುಪಯೋಗ ಮಾಡಲಾಗುತ್ತಿತ್ತು ಎಂದು ವಿದ್ಯಾರ್ಥಿನಿಯರು ತಿಳಿಸಿದ್ದಾರೆ.

ಪ್ರಸ್ತುತ 62 ವರ್ಷದ ಚೈತನ್ಯಾನಂದ ಸರಸ್ವತಿ ತಲೆಮರೆಸಿಕೊಂಡಿದ್ದಾರೆ. ದೆಹಲಿ ಪೊಲೀಸರು ದೆಹಲಿ, ಹರಿಯಾಣ, ಉತ್ತರ ಪ್ರದೇಶ, ಉತ್ತರಾಖಂಡ ಮತ್ತು ರಾಜಸ್ಥಾನದಲ್ಲಿ ವ್ಯಾಪಕ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಅವರ ದೇಶತ್ಯಾಗ ತಡೆಯಲು ಲುಕ್‌ಔಟ್ ನೋಟಿಸ್ ಹೊರಡಿಸಲಾಗಿದೆ.

 

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow