ವಿಧಾನ ಪರಿಷತ್ ಸ್ಥಾನಕ್ಕೆ ರಾಜೀನಾಮೆ: ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ - ಸಿ.ಪಿ. ಯೋಗೇಶ್ವರ್ ಘೋಷಣೆ

ಅಕ್ಟೋಬರ್ 21, 2024 - 17:07
 0  15
ವಿಧಾನ ಪರಿಷತ್ ಸ್ಥಾನಕ್ಕೆ ರಾಜೀನಾಮೆ: ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ - ಸಿ.ಪಿ. ಯೋಗೇಶ್ವರ್ ಘೋಷಣೆ

ಬೆಂಗಳೂರು: ಬಿಜೆಪಿ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಸಿ.ಪಿ.ಯೋಗೇಶ್ವರ್ ರಾಜೀನಾಮೆ ನೀಡಿದ್ದಾರೆ. ಹುಬ್ಬಳ್ಳಿಯಲ್ಲಿ ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು ಭೇಟಿಯಾಗಿ ಎಂಎಲ್ಸಿ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಇಂದು ಬೆಂಗಳೂರಿನಿಂದ ವಿಮಾನದ ಮೂಲಕ ಹುಬ್ಬಳ್ಳಿಗೆ ತೆರಳಿ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ರಾಜೀನಾಮೆ ನೀಡಿದ್ದಾರೆ.

ಚನ್ನಪಟ್ಟಣ ಉಪಚುನಾವಣೆಯಲ್ಲಿ ಬಿಜೆಪಿಯಿಂದ ಕಣಕ್ಕಿಳಿಯಲು ಸಿಪಿವೈ ನಿರ್ಧರಿಸಿದ್ದರು. ಕೊನೇ ಕ್ಷಣದವರೆಗೂ ಟಿಕೆಟ್ ಸಿಗಬಹುದು ಎಂಬ ನಿರೀಕ್ಷೆಯಲ್ಲಿದ್ದ ಸಿಪಿವೈಗೆ ಬಿಜೆಪಿ ಕಡೆಯಿಂದ ಯಾವುದೇ ಶುಭ ಸುದ್ದಿ ಸಿಗದ ಕಾರಣ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯಲು ನಿರ್ಧರಿಸಿದ್ದಾರೆ. ಹಾಗಾಗಿ ವಿಧಾನ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.

ರಾಜೀನಾಮೇ ನೀಡಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಚುನಾವಣೆಗೆ ಸ್ಪರ್ಧಿಸಬೇಕಾದರೆ ರಾಜೀನಾಮೆ ನೀಡಬೇಕಾಗಿರುತ್ತದೆ. ಹಾಗಾಗಿ ಪರಿಷತ್ ನಾಮನಿರ್ದೇಶಿತ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ. ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದೇನೆ ಅಷ್ಟೇ. ನಾನಿನ್ನು ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿಲ್ಲ. ವಿಧಾನ ಪರಿಷತ್ ಸದಸ್ಯತ್ವಕ್ಕೆ ನಾನು ರಾಜೀನಾಮೆ ಕೊಟ್ಟಿದ್ದೇನೆ. ಸಭಾಪತಿ ಬಸವರಾಜ ಹೊರಟ್ಟಿ ಅವರು ರಾಜೀನಾಮೆ ಅಂಗೀಕರಿಸಿದ್ದಾರೆ. ನಾನು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ತೀರ್ಮಾನಿಸಿದ್ದೇನೆ ಎಂದು ತಿಳಿಸಿದರು.

ವೆಬ್ ಡೆಸ್ಕ್
ಫೋಕಸ್ ಕರ್ನಾಟಕ

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow