ವಿಮಾನ ಅಪಘಾತದಲ್ಲಿ ಗುಜರಾತ್ ಮಾಜಿ ಸಿಎಂ ವಿಜಯ್ ರೂಪಾನಿ ನಿಧನ!

ಅಹಮದಾಬಾದ್, ಜೂನ್ 12: ಗುಜರಾತ್‌ನ ಅಹಮದಾಬಾದ್‌ನಲ್ಲಿ ಏರ್ ಇಂಡಿಯಾದ AI-171 ಪ್ರಯಾಣಿಕ ವಿಮಾನ ಅಪಘಾತಕ್ಕೀಡಾಗಿದೆ. 242 ಜನರು ಪ್ರಯಾಣಿಸುತ್ತಿದ್ದರು. ಈ ವಿಮಾನದಲ್ಲಿ ಗುಜರಾತ್‌ನ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ನಿಧನ ಹೊಂದಿದ್ದಾರೆ.
ಹಲವು ರಾಜಕೀಯ ನಾಯಕರು ರೂಪಾನಿ ಅವರ ದುರಂತ ಸಾವಿಗೆ ಸಂತಾಪ ಸೂಚಿಸಿದ್ದಾರೆ. ಲಂಡನ್‌ಗೆ ಪ್ರಯಾಣಿಸುತ್ತಿದ್ದ ವಿಜಯ್ ರೂಪಾನಿ 12ನೇ ಸೀಟಿನಲ್ಲಿ ಕುಳಿತುಕೊಂಡಿದ್ದರು. ಈ ಮೂಲಕ ವಿಮಾನ ಪತನದಲ್ಲಿ ಮೃತಪಟ್ಟ ಎರಡನೇ ಮಾಜಿ ಮುಖ್ಯಮಂತ್ರಿಯಾಗಿದ್ದಾರೆ.
ಲಂಡನ್‌ನಲ್ಲಿರುವ ಮಗಳ ಮನೆಗೆ ತೆರಳಲು ರೂಪಾನಿ ವಿಮಾನ ಹತ್ತಿದ್ದರು. ಇಬ್ಬರು ಪೈಲಟ್, 10 ಸಿಬ್ಬಂದಿ ಸೇರಿ ಒಟ್ಟು 242 ಮಂದಿ ವಿಮಾನದಲ್ಲಿ ಪ್ರಯಾಣಿಸುತ್ತಿದ್ದರು. ಈಗಾಗಲೇ 130ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದು ಸಾವಿನ ಸಂಖ್ಯೆ ಕ್ಷಣ ಕ್ಷಣಕ್ಕೂ ಏರಿಕೆ ಆಗುತ್ತಿದೆ.
ನಿಮ್ಮ ಪ್ರತಿಕ್ರಿಯೆ ಏನು?






