ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ಚಂದ್ರಶೇಖರನಾಥ ಸ್ವಾಮೀಜಿ ವಿಧಿವಶ!

ಆಗಸ್ಟ್ 16, 2025 - 12:02
 0  11
ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ಚಂದ್ರಶೇಖರನಾಥ ಸ್ವಾಮೀಜಿ ವಿಧಿವಶ!

ಬೆಂಗಳೂರು: ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಕೆಂಗೇರಿಯ ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ಚಂದ್ರಶೇಖರನಾಥ ಸ್ವಾಮೀಜಿ (81) ತಡರಾತ್ರಿ 12.01ರ ಸುಮಾರಿಗೆ ವಿಧಿವಶರಾಗಿದ್ದಾರೆ.

ಮಧ್ಯಾಹ್ನ 3 ಗಂಟೆಗೆ ನಿಶ್ಚಲಾನಂದನಾಥ ಸ್ವಾಮೀಜಿ ನೇತೃತ್ವದಲ್ಲಿ ಅಂತ್ಯಕ್ರಿಯೆ ವಿಧಿವಿಧಾನ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಕೆಂಗೇರಿಯಲ್ಲಿರುವ ಮಠದ ಆವರಣದಲ್ಲಿ ಅಂತಿಮ ದರ್ಶನಕ್ಕೆ ಸಾರ್ವಜನಿಕರಿಗೆ ಅವಕಾಶ ಕಲ್ಪಿಸಲಾಗಿದೆ.

ಚಂದ್ರಶೇಖರನಾಥ ಸ್ವಾಮೀಜಿ ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠವನ್ನು ಸ್ಥಾಪಿಸಿ, ಶಿಕ್ಷಣ ಮತ್ತು ಆಧ್ಯಾತ್ಮಿಕ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಅವರ ನಿಧನದಿಂದ ಒಕ್ಕಲಿಗ ಸಮುದಾಯ ಸೇರಿದಂತೆ ಅನೇಕ ಭಕ್ತರಲ್ಲಿ ದುಃಖದ ವಾತಾವರಣ ನಿರ್ಮಾಣವಾಗಿದೆ.

ಸ್ವಾಮೀಜಿಗಳ ನಿಧನಕ್ಕೆ ರಾಜಕೀಯ ನಾಯಕರೂ ಸಂತಾಪ ವ್ಯಕ್ತಪಡಿಸಿದ್ದಾರೆ. ಡಿಸಿಎಂ ಡಿ.ಕೆ. ಶಿವಕುಮಾರ್ ಟ್ವೀಟ್ ಮಾಡುತ್ತಾ, “ವಿಶ್ವ ಒಕ್ಕಲಿಗರ ಮಠದ ಮಠಾಧೀಶರಾಗಿದ್ದ ಶ್ರೀ ಕುಮಾರ ಚಂದ್ರಶೇಖರ ಸ್ವಾಮೀಜಿ ಅವರು ಭೈರವೈಕ್ಯರಾದ ಸುದ್ದಿ ತಿಳಿದು ಮನಸ್ಸಿಗೆ ನೋವಾಗಿದೆ. ಪೂಜನೀಯರು ಸಮಾಜಕ್ಕೆ ನೀಡಿದ ಕೊಡುಗೆ ಅಪಾರ” ಎಂದು ತಿಳಿಸಿದ್ದಾರೆ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow