ವಿಷ್ಣು ಸ್ಮಾರಕ ನೆಲಸಮ: "ಅಭಿಮಾನಿಗಳ ಹೃದಯವೇ ನಿಮಗೆ ಗುಡಿ" ಎಂದ ನಟಿ ರಮ್ಯಾ
ಇತ್ತೀಚೆಗೆ ಚಂದನವನದ ಸಾಹಸಸಿಂಹ ಡಾ.ವಿಷ್ಣುವರ್ಧನ್ ಅವರ ಸ್ಮಾರಕ/ಸಮಾಧಿಯನ್ನು ನೆಲಸಮ ಮಾಡಿರುವುದು ಅಭಿಮಾನಿಗಳು ಹಾಗೂ ಚಿತ್ರರಂಗದವರಿಗೆ ಬಹಳಾನೇ ನೋವುಂಟುಮಾಡಿದೆ. ವರಮಹಾಲಕ್ಷ್ಮೀ ಹಬ್ಬದ ಸಂಭ್ರಮದಲ್ಲಿರುವಾಗಲೇ ಬೆಂಗಳೂರು ಹೊರವಲಯದ ಅಭಿಮಾನ್ ಸ್ಟುಡಿಯೋದಲ್ಲಿದ್ದ ವಿಷ್ಣು ಪುಣ್ಯಭೂಮಿ ನೆಲಸಮಗೊಂಡ ಸುದ್ದಿ ಎಲ್ಲರನ್ನೂ ಆಘಾತಕ್ಕೀಡುಮಾಡಿತು. ಈ ಕುರಿತು ಸದ್ಯ ಸಾಕಷ್ಟು ಚರ್ಚೆಗಳಾಗುತ್ತಿವೆ. ಆರೋಪ ಮತ್ತು ಪ್ರತ್ಯಾರೋಪಗಳು ಶುರುವಾಗಿವೆ.
ಇದೀಗ ಸ್ಯಾಂಡಲ್‌ವುಡ್ ಕ್ವೀನ್ ರಮ್ಯಾ ಈ ವಿಚಾರವಾಗಿ ಸೋಷಿಯಲ್ ಮೀಡಿಯಾದಲ್ಲಿ ಸ್ಟೋರಿ ಹಂಚಿಕೊಂಡಿದ್ದಾರೆ.ಇನ್ಸ್‌ಸ್ಟಾಗ್ರಾಂನಲ್ಲಿ ನಟಿ ಹಾಕಿಕೊಂಡಿರುವ ಸ್ಟೋರಿಯಲ್ಲಿ, ನಟ ವಿಷ್ಣುವರ್ಧನ್ ಅವರ ಫೋಟೋ ಹಂಚಿಕೊಂಡು ಅದರಲ್ಲಿ ಸಾಧಕನಿಗೆ ಸಾವಿಲ್ಲ, ಅಭಿಮಾನಿಗಳ ಹೃದಯವೇ ನಿಮಗೆ ಗುಡಿ ಎಂದು ಬರೆದುಕೊಂಡಿದ್ದಾರೆ.
ಧೀಮಂತ ನಾಯಕನ ವಿಚಾರದಲ್ಲಿ ಈ ವಿವಾದವನ್ನ ಅವರನ್ನ ಪ್ರೀತಿಸುವಂತಹ ಅಭಿಮಾನಿಗಳು ತೀವ್ರವಾಗಿ ಖಂಡಿಸಿದ್ದಾರೆ. ಸಮಾಧಿ ಸ್ಥಳವನ್ನು ರಾತ್ರೋರಾತ್ರಿ ನಾಶಗೊಳಿಸಿ ಅಲ್ಲಿ ಯಾವುದೇ ಕುರುಹು ಇಲ್ಲದಂತೆ ವಿರೋಧಿಗಳು ಮಾಡಿದ್ದಾರೆ. ಹೀಗಾಗಿ ಅಭಿಮಾನಿಗಳು ಪ್ರತಿಭಟನೆಗೆ ಮುಂದಾಗಿದ್ದರು. ಆದರೆ ಪೊಲೀಸರು ಇದಕ್ಕೆ ಅವಕಾಶ ಮಾಡಿಕೊಡಲಿಲ್ಲ.
ನಿಮ್ಮ ಪ್ರತಿಕ್ರಿಯೆ ಏನು?