ವಿಷ್ಣುವರ್ಧನ್​​, ಬಿ. ಸರೋಜಾದೇವಿಗೆ ಮರಣೋತ್ತರ ‘ಕರ್ನಾಟಕ ರತ್ನ’ ಘೋಷಣೆ!

ಸೆಪ್ಟೆಂಬರ್ 11, 2025 - 20:01
 0  7
ವಿಷ್ಣುವರ್ಧನ್​​, ಬಿ. ಸರೋಜಾದೇವಿಗೆ ಮರಣೋತ್ತರ ‘ಕರ್ನಾಟಕ ರತ್ನ’ ಘೋಷಣೆ!

ಕನ್ನಡ ಚಲನಚಿತ್ರರಂಗದ ದಿಗ್ಗಜರಾದ ಡಾ. ವಿಷ್ಣುವರ್ಧನ್ ಮತ್ತು ಬಿ. ಸರೋಜಾದೇವಿ ಅವರಿಗೆ ರಾಜ್ಯದ ಅತ್ಯುನ್ನತ ನಾಗರಿಕ ಗೌರವವಾದ ‘ಕರ್ನಾಟಕ ರತ್ನ’ ಪ್ರಶಸ್ತಿ ಘೋಷಿಸಲಾಗಿದೆ. ವಿಷ್ಣುವರ್ಧನ್ ಅವರು 200ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿ ಅಭಿಮಾನಿಗಳನ್ನು ರಂಜಿಸಿದ್ದರು. ಕನ್ನಡ ಚಿತ್ರರಂಗಕ್ಕೆ ಅವರು ನೀಡಿದ ಕೊಡುಗೆ ಅಪಾರ. ಬಿ. ಸರೋಜಾದೇವಿಯವರು ದೀರ್ಘಕಾಲ ಚಿತ್ರರಂಗದಲ್ಲಿ ತಮ್ಮ ಅದ್ಭುತ ಅಭಿನಯದ ಮೂಲಕ ಪ್ರೇಕ್ಷಕರ ಮೆಚ್ಚುಗೆ ಪಡೆದಿದ್ದರು.

ಅಭಿಮಾನಿಗಳ ಹಾಗೂ ಕುಟುಂಬದವರ ಬಹುಕಾಲದ ಬೇಡಿಕೆಯಾಗಿದ್ದ ಈ ಘೋಷಣೆ ಈಗ ನೆರವೇರಿದ್ದು, ಕನ್ನಡಿಗರಲ್ಲಿ ಅಪಾರ ಸಂತಸ ಉಂಟುಮಾಡಿದೆ. ಭಾರತಿ ವಿಷ್ಣುವರ್ಧನ್, ಅನಿರುದ್ಧ್ ಅವರು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮನವಿ ಮಾಡಿದ್ದರು. ಅಲ್ಲದೇ, ಕನ್ನಡ ಚಿತ್ರರಂಗದ ಹಿರಿಯ ನಟಿಯರಾದ ಜಯಮಾಲಾ, ಶ್ರುತಿ, ಮಾಳವಿಕಾ ಅವಿನಾಶ್ ಅವರು ಕೂಡ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದರು.

ವಿಷ್ಣುವರ್ಧನ್ ಮತ್ತು ಬಿ. ಸರೋಜಾದೇವಿ ಅವರಿಗೆ ಮರಣೋತ್ತರವಾಗಿ ‘ಕರ್ನಾಟಕ ರತ್ನ’ ಪ್ರಶಸ್ತಿ ನೀಡಬೇಕು ಎಂದು ಅವರು ಮನವಿ ಮಾಡಿಕೊಂಡಿದ್ದರು. ಅಭಿಮಾನಿಗಳ ಪಾಲಿಗೆ ‘ಸಾಹಸ ಸಿಂಹ’ ಎನಿಸಿಕೊಂಡರು. ಚಿತ್ರರಂಗದಲ್ಲಿ ಅವರು ಮಾಡಿದ ಸಾಧನೆಯನ್ನು ಗುರುತಿಸಿ ‘ಕರ್ನಾಟಕ ರತ್ನ’ ಪ್ರಶಸ್ತಿ ನೀಡಲಾಗಿದೆ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow