ವೆಸ್ಟ್ ಇಂಡೀಸ್ ವಿರುದ್ಧ ರೋಚಕ ಗೆಲುವು! ಹೇಗಿತ್ತು ಭಾರತದ ಮಹಿಳಾ ಮಣಿಯರ ಆರ್ಭಟ!

ವೆಸ್ಟ್ ಇಂಡೀಸ್ ವಿರುದ್ಧ ಗೆದ್ದು ಬೀಗಿದ ಟೀಮ್ ಇಂಡಿಯಾವು 211 ರನ್‌ಗಳ ರೋಚಕ ಗೆಲುವು ಸಾಧಿಸಿದೆ. ಪಂದ್ಯದಲ್ಲಿ ಕ್ಯಾಪ್ಟನ್ ಹರ್ಮನ್‌ಪ್ರೀತ್ ಕೌರ್ ನೇತೃತ್ವದ ಟೀಮ್ ಇಂಡಿಯಾ ವೆಸ್ಟ್ ಇಂಡೀಸ್ ತಂಡವನ್ನು 211 ರನ್ಗಳಿಂದ ಸೋಲಿಸಿದೆ.
ಮೊದಲು ಬ್ಯಾಟಿಂಗ್ ಮಾಡಿದ ಟೀಮ್ ಇಂಡಿಯಾ ಪರ ಯುವ ಬ್ಯಾಟರ್ ಪ್ರತೀಕಾ ರಾವಲ್ ಹಾಗೂ ಮಂಧಾನ ಜೋಡಿ ಅಬ್ಬರಿಸಿತು. ಮೊದಲ ವಿಕೆಟ್‌ಗೆ 110 ರನ್‌ಗಳ ಅತ್ಯುತ್ತಮ ಜೊತೆಯಾಟದ ಕಾಣಿಕೆ ನೀಡಿತು. ವೆಸ್ಟ್ ಇಂಡೀಸ್ ವಿರುದ್ಧ ಅಮೋಘ ಬ್ಯಾಟಿಂಗ್ ಮಾಡಿದ ಮಧಾನ ಅರ್ಧಶತಕದ ಇನ್ನಿಂಗ್ಸ್ ಆಡಿದರು.
ಮಂಧಾನ ಶತಕ ಪೂರೈಸಲು ಸಾಧ್ಯವಾಗದೆ 91 ರನ್ ಗಳಿಸಿ ಔಟಾದರು. ಬಳಿಕ ಬಂದ ಕ್ಯಾಪ್ಟನ್ ಹರ್ಮನ್‌ಪ್ರೀತ್ ಕೌರ್, ರಿಚಾ ಘೋಷ್ ಮತ್ತು ಜೆಮಿಮಾ ರೋಡ್ರಿಗಸ್ ಕೂಡ ವೇಗದ ಇನ್ನಿಂಗ್ಸ್ ಆಡಿದ್ರು. ಉಪನಾಯಕಿ ಸ್ಮೃತಿ ಮಂಧಾನ 91 ರನ್‌ಗಳ ನೆರವಿನಿಂದ ಟೀಮ್ ಇಂಡಿಯಾ 50 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 314 ರನ್ ಗಳಿಸಿತು
ಇನ್ನು, ಟೀಮ್ ಇಂಡಿಯಾ ಟಾರ್ಗೆಟ್ ಬೆನ್ನತ್ತಿದ ವೆಸ್ಟ್ ಇಂಡೀಸ್ ಕೇವಲ 103 ರನ್ಗಳಿಗೆ ಆಲೌಟ್ ಆಯಿತು.
ನಿಮ್ಮ ಪ್ರತಿಕ್ರಿಯೆ ಏನು?






