ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಸರಣಿಗೆ ಭಾರತ ತಂಡ ಪ್ರಕಟ!

ಸೆಪ್ಟೆಂಬರ್ 26, 2025 - 09:08
 0  12
ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಸರಣಿಗೆ ಭಾರತ ತಂಡ ಪ್ರಕಟ!

ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಣ ಟೆಸ್ಟ್ ಸರಣಿಯು ಅಕ್ಟೋಬರ್ 2 ರಿಂದ ಶುರುವಾಗಲಿದೆ. ಈ ಸರಣಿಗಾಗಿ ಭಾರತ ತಂಡ ಪ್ರಕಟಿಸಲಾಗಿದೆ 

15 ಸದಸ್ಯರುಗಳ ಈ ತಂಡವನ್ನು ಶುಭ್​ಮನ್ ಗಿಲ್ ಮುನ್ನಡೆಸಲಿದ್ದಾರೆ. ಇನ್ನು ಉಪನಾಯಕನಾಗಿ ರವೀಂದ್ರ ಜಡೇಜಾ ಕಾಣಿಸಿಕೊಳ್ಳಲಿದ್ದಾರೆ. ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿ ವೇಳೆ ಟೀಮ್ ಇಂಡಿಯಾ ಉಪನಾಯಕ ರಿಷಭ್ ಪಂತ್ ಗಾಯಗೊಂಡಿದ್ದರು. ಹೀಗಾಗಿ ವಿಂಡೀಸ್ ಸರಣಿಯಿಂದ ಹೊರಗುಳಿದಿದ್ದಾರೆ.

ರಿಷಭ್ ಪಂತ್ ಅವರ ಅಲಭ್ಯತೆಯ ನಡುವೆ ಭಾರತ ತಂಡದ ವಿಕೆಟ್ ಕೀಪರ್ ಆಗಿ ಧ್ರುವ್ ಜುರೆಲ್ ಕಾಣಿಸಿಕೊಳ್ಳಲಿದ್ದಾರೆ. ಇನ್ನು ಬ್ಯಾಕಪ್ ವಿಕೆಟ್ ಕೀಪರ್ ಆಗಿ ತಮಿಳುನಾಡು ಮೂಲದ ಎನ್​. ಜಗದೀಸನ್ ಆಯ್ಕೆಯಾಗಿದ್ದಾರೆ.

ಇನ್ನುಳಿದಂತೆ ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ಕಾಣಿಸಿಕೊಂಡ ಬಹುತೇಕ ಆಟಗಾರರು ವಿಂಡೀಸ್​ ಸರಣಿಯಲ್ಲೂ ಕಣಕ್ಕಿಳಿಯಲಿದ್ದಾರೆ. ಅದರಂತೆ ಆರಂಭಿಕರಾಗಿ ಯಶಸ್ವಿ ಜೈಸ್ವಾಲ್ ಹಾಗೂ ಕೆಎಲ್ ರಾಹುಲ್ ಇನಿಂಗ್ಸ್ ಆರಂಭಿಸಲಿದ್ದಾರೆ.

ಇನ್ನು ಮೂರನೇ ಕ್ರಮಾಂಕದಲ್ಲಿ ಸಾಯಿ ಸುದರ್ಶನ್ ಬ್ಯಾಟ್ ಬೀಸಲಿದ್ದಾರೆ. ನಾಲ್ಕನೇ ಕ್ರಮಾಂಕವು ಶುಭ್​ಮನ್ ಗಿಲ್​ಗೆ ಫಿಕ್ಸ್. ಐದನೇ ಕ್ರಮಾಂಕದಲ್ಲಿ ಧ್ರುವ್ ಜುರೆಲ್ ಕಾಣಿಸಿಕೊಂಡರೆ, ಆಲ್​ರೌಂಡರ್​ಗಳಾಗಿ ರವೀಂದ್ರ ಜಡೇಜಾ, ಅಕ್ಷರ್ ಪಟೇಲ್ ಹಾಗೂ ವಾಷಿಂಗ್ಟನ್ ಸುಂದರ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

ವೇಗಿಗಳಾಗಿ ಜಸ್​ಪ್ರೀತ್ ಬುಮ್ರಾ. ಮೊಹಮ್ಮದ್ ಸಿರಾಜ್ ಹಾಗೂ ಪ್ರಸಿದ್ಧ್ ಕೃಷ್ಣ ತಂಡದಲ್ಲಿದ್ದಾರೆ

ಭಾರತ ಟೆಸ್ಟ್ ತಂಡ: ಶುಭ್​​ಮನ್ ಗಿಲ್ (ನಾಯಕ), ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ಸಾಯಿ ಸುದರ್ಶನ್, ದೇವದತ್ ಪಡಿಕ್ಕಲ್, ಧ್ರುವ್ ಜುರೆಲ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ಜಸ್​ಪ್ರೀತ್ ಬುಮ್ರಾ, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ, ನಿತೀಶ್ ಕುಮಾರ್ ರೆಡ್ಡಿ, ಎನ್ ಜಗದೀಸನ್ (ವಿಕೆಟ್ ಕೀಪರ್)

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow