ಶತಕದ ಜೊತೆ ಚೇಸ್ ಮಾಸ್ಟರ್ ಕಿಂಗ್ ಕೊಹ್ಲಿ ದಾಖಲೆ ಬರೆದ ವಿಲಿಯಮ್ಸನ್!

ನ್ಯೂಝಿಲೆಂಡ್ ತಂಡದ ಅನುಭವಿ ದಾಂಡಿಗ ಕೇನ್ ವಿಲಿಯಮ್ಸನ್ ಅವರು ಟೀಮ್ ಇಂಡಿಯಾದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ದಾಖಲೆ ಮುರಿದಿದ್ದಾರೆ.
ಪಾಕಿಸ್ತಾನದಲ್ಲಿ ನಡೆಯುತ್ತಿರುವ ತ್ರಿಕೋನ ಸರಣಿಯ ದ್ವಿತೀಯ ಪಂದ್ಯದಲ್ಲಿ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ವಿಲಿಯಮ್ಸನ್ ಅಜೇಯ 133 ರನ್ ಬಾರಿಸಿ ಮಿಂಚಿದ್ದಾರೆ.
ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಝಿಲೆಂಡ್ ತಂಡದ ನಾಯಕ ಮಿಚೆಲ್ ಸ್ಯಾಂಟ್ನರ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಸೌತ್ ಆಫ್ರಿಕಾ ಪರ ಆರಂಭಿಕ ಆಟಗಾರ ಮ್ಯಾಥ್ಯೂ ಬ್ರೀಟ್ಝ್ಕೆ 148 ಎಸೆತಗಳಲ್ಲಿ 5 ಸಿಕ್ಸ್ ಹಾಗೂ 11 ಫೋರ್ಗಳೊಂದಿಗೆ 150 ರನ್ ಚಚ್ಚಿದ್ದರು. ಈ ಶತಕದ ನೆರವಿನಿಂದ ಸೌತ್ ಆಫ್ರಿಕಾ 50 ಓವರ್ಗಳಲ್ಲಿ 6 ವಿಕೆಟ್ ಕಳೆದುಕೊಂಡು 304 ರನ್ ಕಲೆಹಾಕಿತು.
305 ರನ್ಗಳ ಗುರಿ ಬೆನ್ನತ್ತಿದ ನ್ಯೂಝಿಲೆಂಡ್ ತಂಡಕ್ಕೆ ಡೆವೊನ್ ಕಾನ್ವೆ (97) ಉತ್ತಮ ಆರಂಭ ಒದಗಿಸಿದರು. ಇನ್ನು ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದು ಅತ್ಯಾಕರ್ಷಕ ಬ್ಯಾಟಿಂಗ್ ಪ್ರದರ್ಶಿಸಿದ ಕೇನ್ ವಿಲಿಯಮ್ಸನ್ 72 ಎಸೆತಗಳಲ್ಲಿ ಶತಕ ಪೂರೈಸಿದರು. ಅಲ್ಲದೆ 113 ಎಸೆತಗಳನ್ನು ಎದುರಿಸಿದ ಕೇನ್ 2 ಸಿಕ್ಸ್ ಹಾಗೂ 13 ಫೋರ್ಗಳೊಂದಿಗೆ ಅಜೇಯ 133 ರನ್ ಬಾರಿಸಿ ತಂಡವನ್ನು ಗೆಲುವಿನ ದಡ ಸೇರಿಸಿದರು.
133 ರನ್ಗಳೊಂದಿಗೆ ಕೇನ್ ವಿಲಿಯಮ್ಸನ್ ಏಕದಿನ ಕ್ರಿಕೆಟ್ನಲ್ಲಿ 7 ಸಾವಿರ ರನ್ ಪೂರೈಸಿದ್ದಾರೆ. ಈ ಮೂಲಕ ಏಕದಿನ ಕ್ರಿಕೆಟ್ ಇತಿಹಾಸದಲ್ಲೇ ಅತೀ ವೇಗವಾಗಿ 7000 ರನ್ ಕಲೆಹಾಕಿದ ವಿಶ್ವದ 2ನೇ ಬ್ಯಾಟರ್ ಎಂಬ ಹೆಗ್ಗಳಿಕೆಯನ್ನು ವಿಲಿಯಮ್ಸನ್ ತಮ್ಮದಾಗಿಸಿಕೊಂಡಿದ್ದಾರೆ
ನಿಮ್ಮ ಪ್ರತಿಕ್ರಿಯೆ ಏನು?






