ಶಿವಮೊಗ್ಗ: ದೆವ್ವ ಬಿಡಿಸುವ ನೆಪದಲ್ಲಿ ಮನಸೋ ಇಚ್ಛೆ ಥಳಿತ, ಮಹಿಳೆ ಸಾವು!

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಜಂಬರಘಟ್ಟ ಗ್ರಾಮದಲ್ಲಿ ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ ನಡೆದಿದೆ. ಮೃತಪಟ್ಟವರು ಗೀತಾ (35) ಎಂದು ಗುರುತಿಸಲಾಗಿದೆ. ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಗೀತಾಗೆ ದೆವ್ವ ಹಿಡಿದಿದೆ ಎಂದು ಊರಿನ ಆಶಾ ಎಂಬ ಮಂತ್ರವಾದಿ ಮಹಿಳೆಯೊಬ್ಬರು ಹೇಳಿದರು. ಬ
ಳಿಕ ಗೀತಾಗೆ ದೆವ್ವ ಬಿಡಿಸುವ ಎಂದು ಕೋಲಿನಿಂದ ಹೊಡೆದಿದ್ದಾರೆ. ಈ ಹೊಡೆತದ ಪರಿಣಾಮ ಗೀತಾ ಗಂಭೀರವಾಗಿ ಅಸ್ವಸ್ಥಳಾಗಿ ಸಾವನ್ನಪ್ಪಿದ್ದಾರೆ. ಮರಣದ ಬಳಿಕ ಗೀತಾರ ಮೃತದೇಹವನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.
ಈ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಹೊಳೆಹೊನ್ನೂರು ಠಾಣೆಯ ಪೊಲೀಸರ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಯಲಿದೆ. ಸದ್ಯ ಈ ಘಟನೆಯೂ ಸಾಕಷ್ಟು ಚರ್ಚೆಗೆ ಎಡೆಮಾಡಿಕೊಟ್ಟಿದೆ. ಮಹಿಳೆಯ ಜೀವ ಹೋಗುವಂತೆ ಹೊಡೆದಿದ್ದ ಆಶಾಳನ್ನು ಪೊಲೀಸರು ಬಂಧಿಸಿದ್ದಾರೆ.
ನಿಮ್ಮ ಪ್ರತಿಕ್ರಿಯೆ ಏನು?






