ಶೀಘ್ರವೇ 2 ಹೊಸ ರೈಲು ನಿಲ್ದಾಣ ನಿರ್ಮಾಣ: ಬೆಂಗಳೂರಿಗರು ನೋಡಲೇಬೇಕಾದ ಸುದ್ದಿ!

ಬೆಂಗಳೂರು:- ಕೇಂದ್ರ ರೈಲ್ವೆ ಇಲಾಖೆಯು ಸಿಲಿಕಾನ್ ಸಿಟಿ ಬೆಂಗಳೂರು ಜನತೆಗಾಗಿ ಹೊಸ ಯೋಜನೆ ರೂಪಿಸಿದೆ. ನಗರದಲ್ಲಿ ಪ್ರಯಾಣಿಕರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಹೀಗಾಗಿ, ಬೆಂಗಳೂರು ಹೊರವಲಯದಲ್ಲಿ ಎರಡು ರೈಲ್ವೆ ಟರ್ಮಿನಲ್ಗಳನ್ನು ತೆರೆಯಲು ಕೇಂದ್ರ ರೈಲ್ವೆ ಇಲಾಖೆ ಮುಂದಾಗಿದೆ.
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದ ಮಾದರಿಯಲ್ಲಿ ಎರಡು ಹೊಸ ರೈಲ್ವೆ ಟರ್ಮಿನಲ್ಗಳನ್ನು ನಿರ್ಮಾಣ ಮಾಡಲಾಗುವುದು. ಬೆಂಗಳೂರು ಗ್ರಾಮಾಂತರ ವ್ಯಾಪ್ತಿಯ ನೆಲಮಂಗಲ, ಚಿಕ್ಕಬಳ್ಳಾಪುರ ಜಿಲ್ಲೆಯ ದೇವನಹಳ್ಳಿಯಲ್ಲಿ ಹೊಸದಾಗಿ ರೈಲ್ವೆ ನಿಲ್ದಾಣ ನಿರ್ಮಣ ಮಾಡಲು ತೀರ್ಮಾನಿಸಲಾಗಿದೆ ಎಂದು ಸಚಿವ ವಿ ಸೋಮಣ್ಣ ಹೇಳಿದ್ದಾರೆ.
800 ಎಕರೆ ಪ್ರದೇಶದಲ್ಲಿ ರೈಲ್ವೆ ನಿಲ್ದಾಣಗಳನ್ನು ನಿರ್ಮಾಣ ಮಾಡಲಾಗುವುದು. ಸದ್ಯ ಅಧಿಕಾರಿಗಳಿಂದ ಜಾಗ ಗುರುತಿಸುವ ಕೆಲಸ ಆಗಿದೆ. ಶೀಘ್ರದಲ್ಲೇ ಕೇಂದ್ರ ಸರ್ಕಾರ ಕೂಡ ಇದಕ್ಕೆ ಒಪ್ಪಿಗೆ ಸೂಚಿಸುವ ಸಾಧ್ಯತೆಯಿದೆ. ಜನ ದಟ್ಟಣೆ ತಪ್ಪಿಸುವಲ್ಲಿ ಈ ಟರ್ಮಿನಲ್ಗಳು ಸಹಕಾರಿಯಾಗಲಿವೆ ಎಂದರು.
ನಿಮ್ಮ ಪ್ರತಿಕ್ರಿಯೆ ಏನು?






