ಶೌಚಾಲಯದೊಳಗೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾ**ರ! ರಾಜಕೀಯ ಮಗನ ಕೈವಾಡ?
ಮುಂಬೈ: ಮಹಾರಾಷ್ಟ್ರದ ಬಾಂದ್ರಾದಲ್ಲಿ ಆಘಾತಕಾರಿ ಘಟನೆ ನಡೆದಿದೆ. ಸಾರ್ವಜನಿಕ ಶೌಚಾಲಯದಲ್ಲಿ 16 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ 20 ವರ್ಷದ ವ್ಯಕ್ತಿಯನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ ಎಂದು ನಿರ್ಮಲ್ ನಗರ ಪೊಲೀಸ್ ಠಾಣೆಯ ಅಧಿಕಾರಿ ತಿಳಿಸಿದ್ದಾರೆ.
ಆರೋಪಿ ಸ್ಥಳೀಯ ರಾಜಕೀಯ ನಾಯಕನ ಮಗನಾಗಿದ್ದು, ಬಾಲಕಿ ಸಾರ್ವಜನಿಕ ಶೌಚಾಲಯವನ್ನು ಬಳಸುತ್ತಿದ್ದ ವೇಳೆ ಅತ್ಯಾಚಾರ ಎಸಗಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಈ ಪ್ರಕರಣವನ್ನು ಪೋಕ್ಸೊ (POCSO – Protection of Children from Sexual Offences Act) ಹಾಗೂ ಭಾರತೀಯ ದಂಡ ಸಂಹಿತೆಯ ಲೈಂಗಿಕ ಅಪರಾಧಗಳ ಅಡಿಯಲ್ಲಿ ದಾಖಲಿಸಲಾಗಿದೆ.
ಈ ಘಟನೆಗೆ ಸ್ಥಳೀಯ ಮಟ್ಟದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಬಾಲಕಿಯ ಪೋಷಕರು ನ್ಯಾಯಕ್ಕಾಗಿ ಮನವಿ ಮಾಡಿಕೊಂಡಿದ್ದು, ಆರೋಪಿಗೆ ಕಠಿಣ ಶಿಕ್ಷೆ ನೀಡಬೇಕು ಎಂಬ ಆಗ್ರಹಿಸಿದ್ದಾರೆ.
ನಿಮ್ಮ ಪ್ರತಿಕ್ರಿಯೆ ಏನು?