‘ಸಂತ’, ‘ನಾಗರಹಾವು’ ಸಿನಿಮಾಗಳ ನಿರ್ದೇಶಕ ಎಸ್ ಮುರಳಿ ಮೋಹನ್ ನಿಧನ..!
ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಮುರಳಿ ಮೋಹನ್ ಅವರು ಇಂದು ಮಧ್ಯಾಹ್ನ 3 ಗಂಟೆ ವೇಳೆಗೆ ನಿಧನರಾಗಿದ್ದಾರೆ. ಬೆಂಗಳೂರಿನ ಜೆಸಿ ರೋಡ್ ಬಳಿಯ ಟ್ರಸ್ಟ್‌ವೆಲ್ ಆಸ್ಪತ್ರೆಯಲ್ಲಿ ಅವರು ಕೊನೆಯುಸಿರೆಳೆದರು. ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಮುರಳಿ ಮೋಹನ್, ಕಳೆದ ಐದಾರು ವರ್ಷಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು. ಕಿಡ್ನಿ ಕಸಿ ಶಸ್ತ್ರಚಿಕಿತ್ಸೆಗೆ ಸುಮಾರು 25 ಲಕ್ಷ ರೂಪಾಯಿ ಅನುದಾನ ಅಗತ್ಯವಿದೆ ಎಂದು ಹಿಂದೆ ಮನವಿ ಮಾಡಿದ್ದರು.
ಉಪೇಂದ್ರ ಅವರ ಆಪ್ತ ಸ್ನೇಹಿತರಾಗಿದ್ದ ಮುರಳಿ ಮೋಹನ್, ಕಾಶೀನಾಥ್ ಗರಡಿಯಲ್ಲಿ ಬೆಳೆದಿದ್ದರು. ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ ಅಭಿನಯದ ‘ಸಂತ’, ರಿಯಲ್ ಸ್ಟಾರ್ ಉಪೇಂದ್ರ ನಟನೆಯ ‘ನಾಗರಹಾವು’, ಕ್ರೇಜಿ ಸ್ಟಾರ್ ರವಿಚಂದ್ರನ್ ಅಭಿನಯದ ‘ಮಲ್ಲಿಕಾರ್ಜುನ’ ಸೇರಿದಂತೆ ಹಲವು ಚಿತ್ರಗಳಿಗೆ ಅವರು ನಿರ್ದೇಶನ ಮಾಡಿದ್ದರು. ಜೊತೆಗೆ, ಉಪೇಂದ್ರ ಅಭಿನಯದ ಅನೇಕ ಚಿತ್ರಗಳಲ್ಲಿ ಅವರು ಕೆಲಸ ಮಾಡಿದ್ದರು.
ನಿಮ್ಮ ಪ್ರತಿಕ್ರಿಯೆ ಏನು?