ಸಂಸದ ತೇಜಸ್ವಿ ಸೂರ್ಯ ವಿರುದ್ಧ ದಾಖಲಾಗಿದ್ದ FIR ರದ್ದು: ಸುಳ್ಳು ಸುದ್ದಿ ಕೇಸ್ ಅರ್ಜಿ ವಜಾ!

ಬೆಂಗಳೂರು:- ಸಂಸದ ತೇಜಸ್ವಿ ಸೂರ್ಯ ವಿರುದ್ಧ ದಾಖಲಾಗಿದ್ದ FIR ರದ್ದಾಗಿದ್ದು, ಸುಳ್ಳು ಸುದ್ದಿ ಕೇಸ್ ಅರ್ಜಿ ವಜಾಗೊಂಡಿದೆ.
ಎಫ್ಐಆರ್ ರದ್ದುಗೊಳಿಸಿದ್ದನ್ನು ಪ್ರಶ್ನಿಸಿ ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ತಿರಸ್ಕರಿಸಿದೆ. ಆ ಮೂಲಕ ಸಂಸದ ತೇಜಸ್ವಿ ಸೂರ್ಯಗೆ ಬಿಗ್ ರಿಲೀಫ್ ಸಿಕ್ಕಿದ್ದು, ಅತ್ತ ಸರ್ಕಾರಕ್ಕೆ ಮುಖಭಂಗ ಉಂಟಾಗಿದೆ.
ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ನೇತೃತ್ವದ ಪೀಠ ವಿಚಾರಣೆ ಮಾಡಿದ್ದು, ನ್ಯಾಯಾಂಗ ವೀಕ್ಷಣೆಗೆ ಒಳಪಟ್ಟ ವಿಷಯವಲ್ಲ ಎಂದು ಹೇಳಿ ಅರ್ಜಿಯನ್ನು ವಜಾಗೊಳಿಸಿದೆ. ಆ ಮೂಲಕ ಸಂಸದ ತೇಜಸ್ವಿ ಸೂರ್ಯಗೆ ರಿಲೀಫ್ ಸಿಕ್ಕಿದ್ದು, ರಾಜ್ಯ ಸರ್ಕಾರಕ್ಕೆ ಹಿನ್ನಡೆಯಾಗಿದೆ.
ವಿಚಾರಣೆ ವೇಳೆ ಗರಂ ಆದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ, ಈ ವಿಷಯವನ್ನು ರಾಜಕೀಯಗೊಳಿಸಬೇಡಿ. ನ್ಯಾಯಾಲಯದ ಹೊರಗೆ ಈ ಹೋರಾಟಗಳನ್ನು ಮಾಡಿ ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ.
ಘಟನೆ ವಿವರ:
ಪಹಣಿಯಲ್ಲಿ ವಕ್ಫ್ ಹೆಸರು ನಮೂದಾಗಿದ್ದರಿಂದ ರೈತ ರುದ್ರಪ್ಪ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಸುಳ್ಳು ಸುದ್ದಿ ಪೋಸ್ಟ್ ಮಾಡಿದ್ದಾರೆಂಬ ಆರೋಪದಡಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಹಾವೇರಿಯ ಸಿಇಎನ್ ಠಾಣೆಯಲ್ಲಿ 2024ರ ನವೆಂಬರ್ 14ರಂದು ಎಫ್ಐಆರ್ ದಾಖಲಾಗಿತ್ತು.
ನಿಮ್ಮ ಪ್ರತಿಕ್ರಿಯೆ ಏನು?






