ಸದನದಲ್ಲಿ RSS ಗೀತೆ ಹಾಡಿದ ವಿಚಾರ: ಕ್ಷಮೆಯಾಚಿಸಿದ ಡಿಸಿಎಂ ಡಿ.ಕೆ ಶಿವಕುಮಾರ್‌!

ಆಗಸ್ಟ್ 26, 2025 - 13:59
 0  14
ಸದನದಲ್ಲಿ RSS ಗೀತೆ ಹಾಡಿದ ವಿಚಾರ: ಕ್ಷಮೆಯಾಚಿಸಿದ ಡಿಸಿಎಂ ಡಿ.ಕೆ ಶಿವಕುಮಾರ್‌!

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿಧಾನಸಭೆ ಅಧಿವೇಶನದಲ್ಲಿ ಆರ್‌ಎಸ್ಎಸ್ ಗೀತೆಯಾದ ನಮಸ್ತೆ ಸದಾ ವತ್ಸಲೇ ಮಾತೃಭೂಮಿ ಎಂದು ಹಾಡಿದ್ದು ವಿವಾದಕ್ಕೆ ಕಾರಣವಾಗಿದೆ. ಹತ್ತಾರು ವ್ಯಾಖ್ಯಾನ, ಚರ್ಚೆಗೂ ನಾಂದಿ ಹಾಡಿದೆ. ಕಾಂಗ್ರೆಸ್ ಪಕ್ಷದೊಳಗೆ ಬಿ.ಕೆ.ಹರಿಪ್ರಸಾದ್ ಸೇರಿದಂತೆ ಅನೇಕರು ವಿರೋಧ ವ್ಯಕ್ತಪಡಿಸಿದ್ದರು.

ಇದೀಗ ಆರ್​ಎಸ್​ಎಸ್ ಗೀತೆ ಹಾಡಿದ್ದಕ್ಕೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕ್ಷಮೆ ಯಾಚಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ನಾನು ಯಾವುದೇ ತಪ್ಪು ಮಾಡಿಲ್ಲ. ವಿರೋಧ ಪಕ್ಷದ ಸಿದ್ಧಾಂತದ ಅರಿವಿದೆ ಎಂಬುದನ್ನು ನಿರೂಪಿಸಿವುದಕ್ಕಾಗಿ ಹಾಗೆ ಹೇಳಿದೆ ಅಷ್ಟೆ.

ಆದರೂ, ಒಂದು ವೇಳೆ ತಪ್ಪು ಮಾಡಿದ್ದೇನೆ ಎಂದು ನೀವು ಭಾವಿಸುವುದೇ ಆದರೆ, ಎಲ್ಲ ಕಾಂಗ್ರೆಸ್ ನಾಯಕರ-ಕಾರ್ಯಕರ್ತರ, ಇಂಡಿ ಒಕ್ಕೂಟದ ನಾಯಕರ ಕ್ಷಮೆ ಕೇಳುತ್ತೇನೆ ಎಂದರು. ಅಲ್ಲದೆ, ಕಾಂಗ್ರೆಸ್ ಪಕ್ಷದ ಕುರಿತಾದ ತಮ್ಮ ನಿಷ್ಠೆಯನ್ನು ಮತ್ತೆ ಸ್ಪಷ್ಟಪಡಿಸಿದರು. ಅಲ್ಲದೆ, ಹೈಕಮಾಂಡ್ ಆಗಲೀ ಇತರ ಯಾರೂ ತಮ್ಮ ಕ್ಷಮೆ ಕೇಳಿಲ್ಲ ಎಂದರು. ಯಾರ ಮನಸನ್ನೂ ನೋಯಿಸುವ ಉದ್ದೇಶ ತಮಗಿಲ್ಲ ಎಂದೂ ಹೇಳಿದರು.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow