ಸಫಾರಿ ವಾಹನದ ಮೇಲೆ ಕಾಡಾನೆ ದಾಳಿ: ಆಮೇಲೇನಾಯ್ತು?

ಸೆಪ್ಟೆಂಬರ್ 7, 2025 - 20:11
 0  7
ಸಫಾರಿ ವಾಹನದ ಮೇಲೆ ಕಾಡಾನೆ ದಾಳಿ: ಆಮೇಲೇನಾಯ್ತು?

ಚಾಮರಾಜನಗರ:- ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರದ ಸಫಾರಿಯಲ್ಲಿ ಸಫಾರಿ ವಾಹನದ ಮೇಲೆ ಕಾಡಾನೆಯೊಂದು ದಾಳಿಗೆ ಯತ್ನಿಸಿದ ಘಟನೆ ಜರುಗಿದೆ. 

ಸಫಾರಿ ರಸ್ತೆಯ ಪಕ್ಕದಲ್ಲಿ ನಿಂತಿದ್ದ ಕಾಡಾನೆಯೊಂದು ಸಫಾರಿ ಜೀಪ್ ಕಂಡ ಕೂಡಲೇ ಅಟ್ಟಾಡಿಸಿಕೊಂಡು ಬಂದಿದೆ. ಈ ವೇಳೆ ಚಾಲಕ ಎಚ್ಚೆತ್ತುಕೊಂಡು ಜೀಪ್ ಅನ್ನು ರಿವರ್ಸ್ ಚಲಾಯಿಸಿ ಅಪಾಯದಿಂದ ಪಾರಾಗಿದ್ದಾರೆ.

ಈ ವೇಳೆ ಕೋಪಗೊಂಡ ಕಾಡಾನೆ ನೆಲಕ್ಕೆ ಕಾಲು ಕೆರೆದು ವಾರ್ನಿಂಗ್ ಕೊಟ್ಟಿದೆ. ಸಫಾರಿ ಜೀಪ್ ಅನ್ನು ಕಾಡಾನೆ ಅಟ್ಟಾಡಿಸಿದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow