ಸರ್ ಸಿಎಂ ರೇಸ್ ನಿಂದ ದೂರ ಉಳಿದ್ರಾ!? ಪ್ರಯತ್ನ ವಿಫಲವಾದ್ರೂ ಪ್ರಾರ್ಥನೆ ಸಫಲವಾಗುತ್ತೆ ಎಂದ ಡಿಕೆಶಿ!

ಜುಲೈ 4, 2025 - 14:04
ಜುಲೈ 4, 2025 - 14:05
 0  9
ಸರ್ ಸಿಎಂ ರೇಸ್ ನಿಂದ ದೂರ ಉಳಿದ್ರಾ!? ಪ್ರಯತ್ನ ವಿಫಲವಾದ್ರೂ ಪ್ರಾರ್ಥನೆ ಸಫಲವಾಗುತ್ತೆ ಎಂದ ಡಿಕೆಶಿ!

ಮೈಸೂರು:- ಸರ್ ಸರ್ ಸಿಎಂ ರೇಸ್ ನಿಂದ ದೂರ ಉಳಿದ್ರಾ ಎಂಬ ಮಾಧ್ಯಮದವರ ಪ್ರಶ್ನೆಗೆ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಮ್ಮದೇ ರೀತಿಯಲ್ಲಿ ಉತ್ತರಿಸಿದ್ದಾರೆ. 

ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಎಲ್ಲರಿಗೂ ಒಳ್ಳೆಯದು ಮಾಡು ಎಂದು ತಾಯಿ ಚಾಮುಂಡೇಶ್ವರಿಯಲ್ಲಿ ಪ್ರಾರ್ಥಿಸಿರುವುದಾಗಿ ತಿಳಿಸಿದ್ದಾರೆ. 

ದುಃಖವನ್ನು ದೂರು ಮಾಡುವ ದೇವಿ ಚಾಮುಂಡಿ. ಈ ಬಾರಿ ಇಡೀ ರಾಜ್ಯದಲ್ಲಿ ಒಳ್ಳೆಯ ಮಳೆಯಾಗಿದೆ. ಎಲ್ಲರಿಗೂ ಒಳ್ಳೆಯದನ್ನು ಮಾಡಲೆಂದು ಪ್ರಾರ್ಥನೆ ಮಾಡಿದ್ದೇನೆ. ಪ್ರಯತ್ನಕ್ಕಿಂತ ಪ್ರಾರ್ಥನೆಯಿಂದ ಫಲ ಸಿಗುತ್ತದೆ ಎಂಬ ನಂಬಿಕೆ ಇದೆ. ಇಡೀ ರಾಜ್ಯಕ್ಕೆ ಏನೇ ಕೆಲಸ ಮಾಡಬೇಕಾದರೂ ತಾಯಿಗೆ ಪೂಜೆ ಸಲ್ಲಿಸಿ ಮಾಡುತ್ತೇವೆ. ಇಂದು ಕುಟುಂಬ ಸಮೇತ ಬಂದು ತಾಯಿಗೆ ಪೂಜೆ ಸಲ್ಲಿಸಿದ್ದೇನೆ ಎಂದು ಹೇಳಿದ್ದಾರೆ.

ನಿಮ್ಮ ಪ್ರಾರ್ಥನೆಗೆ ಫಲ ಸಿಗುತ್ತಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಪ್ರಯತ್ನ ವಿಫಲವಾದರೂ ಪ್ರಾರ್ಥನೆ ವಿಫಲವಾಗುವುದಿಲ್ಲ ಎಂಬುದು ನನ್ನ ನಂಬಿಕೆ. ನನಗೆ ಏನು ಬೇಕೋ ಅದನ್ನು ಪ್ರಾರ್ಥನೆ ಮಾಡಿದ್ದೇನೆ. ಯಾವ ಚರ್ಚೆಯೂ ಬೇಡ ಈಗ ಎಂದು ಸಿಎಂ ರೇಸ್ ವಿಚಾರಕ್ಕೆ ಪ್ರತಿಕ್ರಿಯಿಸಿದ್ದಾರೆ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow