ಸರ್ಕಾರದ ಯಾವ ಯೋಜನೆಗಳು ಕೂಡ ಬಡವರಿಗೆ ತಲುಪುತ್ತಿಲ್ಲ: ಬಿವೈ ವಿಜಯೇಂದ್ರ ಆರೋಪ

ನವದೆಹಲಿ: ಸರ್ಕಾರದ ಯಾವ ಯೋಜನೆಗಳು ಕೂಡ ಬಡವರಿಗೆ ತಲುಪುತ್ತಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಆರೋಪಿಸಿದ್ದಾರೆ. ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸರ್ಕಾರದ ಯಾವ ಯೋಜನೆಗಳು ಕೂಡ ಬಡವರಿಗೆ ತಲುಪುತ್ತಿಲ್ಲ. ಭಾಗ್ಯಲಕ್ಷ್ಮಿ ಯೋಜನೆಯ ಹಣವನ್ನು ನೀಡಲಾಗುತ್ತಿಲ್ಲ. ಹಾಲಿಗೆ ಸಬ್ಸಿಡಿ ಕೊಡುತ್ತಿಲ್ಲ. ನಬಾರ್ಡ್ ಹಣ ಕಡಿತ ಮಾಡಿದ್ದಾರೆ ಎಂದು ಸಿಎಂ ಸುಳ್ಳು ಹೇಳುತ್ತಿದ್ದಾರೆ. ಎಲ್ಲಾ ಗೊತ್ತಿದ್ದೂ ಕೇಂದ್ರದ ಮೇಲೆ ಗೂಬೆ ಕೂರಿಸುವ ಕೆಲಸ ಆಗುತ್ತಿದೆ ಎಂದು ವಿಜಯೇಂದ್ರ ಹೇಳಿದರು.
ಇನ್ನೂ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವುದು ಸನ್ನಿಹಿತವಾಗಿದೆ. ಅದನ್ನೇ ಗೃಹ ಸಚಿವ ಡಾ. ಜಿ ಪರಮೇಶ್ವರ್ ಮೈಸೂರಿನಲ್ಲಿ ಹೇಳಿದ್ದಾರೆ. ಆಡಳಿತ ಪಕ್ಷದ ಶಾಸಕರಲ್ಲಿ ಅಸಮಾಧಾನ ಭುಗಿಲೆದ್ದಿದೆ. ಗ್ಯಾರಂಟಿ ಯೋಜನೆಗಳನ್ನು ಈಡೇರಿಸಲು ಆಗದಿದ್ದರೆ ಜನರ ಕ್ಷಮೆ ಕೇಳಿ, ಅದನ್ನು ಬಿಟ್ಟು ಬಡವರಿಗೆ ತೊಂದರೆ ಕೊಡಬೇಡಿ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ವಿಜಯೇಂದ್ರ ವಾಗ್ದಾಳಿ ನಡೆಸಿದರು.
ನಿಮ್ಮ ಪ್ರತಿಕ್ರಿಯೆ ಏನು?






