ಸರ್ಕಾರಿ ನೌಕರರಿಗೆ BPL ಕಾರ್ಡ್ ಕೊಡಬಾರದು ಅಂತ ಗೈಡ್ ಲೈನ್ ರಚಿಸಿದ್ದೇ BJP: ಸಿಎಂ ಸಿದ್ದರಾಮಯ್ಯ

ಮೈಸೂರು: ಸರ್ಕಾರಿ ನೌಕರರಿಗೆ ಬಿಪಿಎಲ್ ಕಾರ್ಡ್ ಕೊಡಬಾರದು ಅಂತ ಗೈಡ್ ಲೈನ್ ರಚಿಸಿದ್ದೇ ಬಿಜೆಪಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಸರ್ಕಾರಿ ನೌಕರರಿಗೂ ಬಿಪಿಎಲ್ ಕಾರ್ಡ್ ಕೊಡಬೇಕಾ? ಆದಾಯ ತೆರಿಗೆ ಪಾವತಿಸುವವರಿಗೂ ಬಿಪಿಎಲ್ ಕಾರ್ಡ್ ಕೊಡಬೇಕಾ?.
ಸರ್ಕಾರಿ ನೌಕರರಿಗೆ, ಆದಾಯ ತೆರಿಗೆ ಪಾವತಿಸುವವರಿಗೆ ಬಿಪಿಎಲ್ ಕಾರ್ಡ್ ಕೊಡಬಾರದು ಅಂತ ನಿಯಮಾವಳಿ, ಗೈಡ್ ಲೈನ್ ರಚಿಸಿದ್ದೇ ಬಿಜೆಪಿ. ಈಗ ಇವರೇ ಪ್ರತಿಭಟನೆ ಅಂತ ಫೋಟೋ ತೆಗೆಸಿಕೊಳ್ತಾ ಇದಾರೆ ಎಂದು ಕಿಡಿಕಾರಿದ್ದಾರೆ.
ಇನ್ನೂ ಆಹಾರ ಭದ್ರತಾ ಕಾಯ್ದೆಯನ್ನು ಜಾರಿ ಮಾಡಿದ್ದು ಪ್ರಧಾನಿ ಮನಮೋಹನ್ ಸಿಂಗ್ ಅವರು. ಹಿಂದಿನ ಕೇಂದ್ರ ಸಚಿವರಾಗಿದ್ದ ಬಿಜೆಪಿ ಮುರಳಿ ಮನೋಹರ ಜೋಶಿಯವರು ಆಹಾರ ಭದ್ರತೆ ಕಾಯ್ದೆಯನ್ನು ವಿರೋಧಿಸಿದ್ದರು. ಈಗ ಅನ್ಯಾಯ ಅನ್ಯಾಯ ಅಂತ ಸುಳ್ ಸುಳ್ಳೇ ರಾಜ್ಯದ ಜನರ ದಿಕ್ಕು ತಪ್ಪಿಸುತ್ತಿದ್ದಾರೆ ಎಂದು ಸಿಎಂ ಆಕ್ರೋಶ ವ್ಯಕ್ತಪಡಿಸಿದರು.
ನಿಮ್ಮ ಪ್ರತಿಕ್ರಿಯೆ ಏನು?






