ಸಲ್ಮಾನ್ ಖಾನ್ ನಟನೆಯ ‘ಸಿಕಂದರ್’ ಸಿನಿಮಾ ಮಾ.30 ಕ್ಕೆ ರಿಲೀಸ್!

ಬಾಲಿವುಡ್ ನಟ ಸಲ್ಮಾನ್ ಖಾನ್ ನಟನೆಯ ‘ಸಿಕಂದರ್’ ಸಿನಿಮಾ ಮಾ.30 ಕ್ಕೆ ರಿಲೀಸ್ ಆಗಲಿದ್ದು, ಅಭಿಮಾನಿಗಳು ಕಾತುರರಾಗಿದ್ದಾರೆ.
ನಟ ಸಲ್ಮಾನ್ ಖಾನ್ ಮತ್ತು ರಶ್ಮಿಕಾ ಮಂದಣ್ಣ ನಟನೆಯ ‘ಸಿಕಂದರ್’ ಚಿತ್ರದ ರಿಲೀಸ್‌ಗೆ ಡೇಟ್ ಫಿಕ್ಸ್ ಆದಂತಾಗಿದೆ. ಕೊಡಗಿನ ಕುವರಿ ರಶ್ಮಿಕಾ ಮಂದಣ್ಣ ಮತ್ತು ಸಲ್ಮಾನ್ ಮೊದಲ ಬಾರಿಗೆ ಜೋಡಿಯಾಗಿ ನಟಿಸಿರುವ ’ಸಿಕಂದರ್’ ಸಿನಿಮಾ ಇದೇ ಮಾ.30ಕ್ಕೆ ಬೆಳ್ಳಿಪರದೆಗೆ ಅಪ್ಪಳಿಸಲಿದೆ. ಈಗಾಗಲೇ ಸಾಂಗ್ಸ್, ಟೀಸರ್ ಮೂಲಕ ‘ಸಿಕಂದರ್’ ಸಿನಿಮಾ ಸೋಶಿಯಲ್ ಮೀಡಿಯಾದಲ್ಲಿ ಹಲ್‌ಚಲ್ ಏಬ್ಬಿಸಿದೆ. ಹಾಗಾಗಿ ಸಿನಿಮಾ ಮೇಲಿನ ನಿರೀಕ್ಷೆ ದುಪ್ಪಟ್ಟಾಗಿದೆ.
ಅಂದಹಾಗೆ, ಸಲ್ಮಾನ್, ರಶ್ಮಿಕಾ ಮಂದಣ್ಣ, ‘ಮಗಧೀರ’ ನಟಿ ಕಾಜಲ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಈ ಚಿತ್ರವನ್ನು ಎ.ಆರ್ ಮುರುಗದಾಸ್ ನಿರ್ದೇಶನ ಮಾಡಿದ್ದಾರೆ. ಸಾಜಿದ್ ನಿರ್ಮಾಣಕ್ಕೆ ಸಾಥ್ ನೀಡಿದ್ದಾರೆ.
ನಿಮ್ಮ ಪ್ರತಿಕ್ರಿಯೆ ಏನು?






