ಸಾಮಾಜಿಕ, ಆರ್ಥಿಕ ಶೈಕ್ಷಣಿಕ ಸಮೀಕ್ಷೆಗೆ ತಡೆಯಾಜ್ಞೆ ನೀಡಲು ಹೈಕೋರ್ಟ್ ನಕಾರ

ಸೆಪ್ಟೆಂಬರ್ 25, 2025 - 18:03
 0  18
ಸಾಮಾಜಿಕ, ಆರ್ಥಿಕ ಶೈಕ್ಷಣಿಕ ಸಮೀಕ್ಷೆಗೆ ತಡೆಯಾಜ್ಞೆ ನೀಡಲು ಹೈಕೋರ್ಟ್ ನಕಾರ

ಬೆಂಗಳೂರು: ಹಲವು ಗೊಂದಲಗಳಿಗೆ ಕಾರಣವಾಗಿದ್ದ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆಗೆ ತಡೆ ನೀಡುವಂತೆ ಸಲ್ಲಿಸಿದ್ದ ಅರ್ಜಿಗಳನ್ನು ಕರ್ನಾಟಕ ಹೈಕೋರ್ಟ್ ತಿರಸ್ಕರಿಸಿದೆ. ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಮತ್ತು ನ್ಯಾಯಮೂರ್ತಿ ಸಿ.ಎಂ. ಜೋಶಿ ಅವರಿದ್ದ ವಿಭಾಗೀಯ ಪೀಠವು ಎರಡು ದಿನಗಳ ವಾದ–ಪ್ರತಿವಾದದ ಬಳಿಕ ಮಧ್ಯಂತರ ಆದೇಶ ಹೊರಡಿಸಿದೆ.

ಮಧ್ಯಂತರ ಆದೇಶದ ಪ್ರಮುಖ ಅಂಶಗಳು:

  • ಸಮೀಕ್ಷೆ ಮುಂದುವರೆಯಬಹುದು, ಆದರೆ ದತ್ತಾಂಶವನ್ನು ಯಾರಿಗೂ ಬಹಿರಂಗಪಡಿಸಬಾರದು.

  • ಜನರು ಸ್ವಯಂಪ್ರೇರಣೆಯಿಂದ ನೀಡಿದರೆ ಮಾತ್ರ ಮಾಹಿತಿ ಪಡೆಯಬೇಕು.

  • ಮಾಹಿತಿ ನೀಡುವಂತೆ ಯಾವುದೇ ಒತ್ತಡ ಹಾಕಬಾರದು.

  • ದತ್ತಾಂಶದ ಗೌಪ್ಯತೆ ಕಾಪಾಡುವ ಜವಾಬ್ದಾರಿ ಹಿಂದೂಳಿದ ವರ್ಗಗಳ ಆಯೋಗದ ಮೇಲಿದೆ.

  • ಆಯೋಗವು ದತ್ತಾಂಶದ ಗೌಪ್ಯತೆ ಕುರಿತು ಪ್ರಮಾಣಪತ್ರ ಸಲ್ಲಿಸಬೇಕು.

  • ಮುಂದಿನ ವಿಚಾರಣೆ ಡಿಸೆಂಬರ್ ಎರಡನೇ ವಾರಕ್ಕೆ ಮುಂದೂಡಲಾಗಿದೆ.

ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಅವರು, “ದತ್ತಾಂಶವನ್ನು ಸರ್ಕಾರದ ಇ-ಆಡಳಿತ ವಿಭಾಗವೇ ಸಂರಕ್ಷಿಸುತ್ತದೆ. ಅಧಿಕಾರಿಗಳಷ್ಟೇ ನಿಯಂತ್ರಣ ಹೊಂದಿರುತ್ತಾರೆ” ಎಂದು ಸ್ಪಷ್ಟಪಡಿಸಿದರು. ಸಮೀಕ್ಷೆಗೆ ತಡೆ ಕೋರಿ ವೀರಶೈವ ಲಿಂಗಾಯತ ಮಹಾಸಭಾ, ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ, ರಾಜ್ಯ ಒಕ್ಕಲಿಗರ ಸಂಘ ಸೇರಿದಂತೆ ಹಲವರು ಪಿಐಎಲ್ ಸಲ್ಲಿಸಿದ್ದರು.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow