ಸಾವಿನ ಮಾರಾಟ ನಿಲ್ಲಿಸಿ : ನಟರ ಪಾನ್ ಮಸಾಲಾ ಉತ್ಪನ್ನಗಳ ಜಾಹೀರಾತಿಗೆ ಜಾನ್ ಅಬ್ರಹಾಂ ಕಿಡಿ.

ಪಾನ್ ಮಸಾಲಾ ಉತ್ಪನ್ನಗಳ ಜಾಹೀರಾತು ನೀಡುವ ನಟರ ವಿರುದ್ಧ ಬಾಲಿವುಡ್ ನಟ ಜಾನ್ ಅಬ್ರಹಾಂ ಕಿಡಿಕಾರಿದ್ದಾರೆ. ಸಂದರ್ಶನವೊಂದರಲ್ಲಿ ಮಾತನಾಡಿದ ಜಾನ್, ‘ಸದೃಢತೆಯ ಪ್ರಜ್ಞೆಯಿಂದ ಆಕಾರವನ್ನು ಕಾಯ್ದುಕೊಳ್ಳಲು ಪ್ರಯತ್ನಿಸುತ್ತಿರುವ ನೀವು ಸಾವನ್ನು ಮಾರಾಟ ಮಾಡುತ್ತಿದ್ದೀರಿ. ಅದರೊಡನೆ ಹೇಗೆ ಬದುಕುತ್ತೀರಿ’ ಎಂದು ಪ್ರಶ್ನಿಸಿದ್ದಾರೆ. ಜೊತೆಗೆ ‘ನಾವು ನುಡಿದಂತೆ ನಡೆದರೆ ಮಾದರಿಯಾಗುತ್ತೇವೆ. ಸಾರ್ವಜನಿಕವಾಗಿ ನಮ್ಮದಲ್ಲದ ವ್ಯಕ್ತಿತ್ವ ಪ್ರದರ್ಶಿಸಿದರೆ ಅದು ಮುಳುವಾಗುತ್ತದೆ. ಸದೃಢತೆಯ ಬಗ್ಗೆ ಮಾತನಾಡುವವರೇ ಪಾನ್ ಮಸಾಲಾ ಅನುಮೋದಿಸುತ್ತಾರೆ. ನಾನು ಯಾವ ನಟರನ್ನು ಅಗೌರವಿಸುತ್ತಿಲ್ಲ. ಆದರೆ ಆದರ್ಶ ಮುಖ್ಯ’ ಎಂದರು.
ದೇಶದಲ್ಲಿ ಮೊದಲ ಬಾರಿಗೆ ಅಂಧ ವಿದ್ಯಾರ್ಥಿಗಳಿಗೆಂದೇ ಅಂತಾರಾಷ್ಟ್ರೀಯ ವಿಶ್ವವಿದ್ಯಾಲಯವು ಒಡಿಶಾದಲ್ಲಿ ಸ್ಥಾಪನೆಯಾಗಲಿದೆ. ಈ ವಿವಿಯವನ್ನು ಜಪಾನ್‌ನ ಸುಕುಬಾ ವಿಶ್ವ ವಿದ್ಯಾಲಯದ ಸಹಯೋಗದೊಂದಿಗೆ ಒಡಿಶಾ ಸರ್ಕಾರ ಸ್ಥಾಪಿಸಲಿದೆ. ಇದರಲ್ಲಿ ಅಂಧ ವಿದ್ಯಾರ್ಥಿಗಳಿಗೆಂದೇ ತಂತ್ರಜ್ಞಾನ, ಉನ್ನತ ವ್ಯಾಸಂಗ, ಅಲ್ಪಾವಧಿ ಕೋರ್ಸ್‌ಗಳಾದ ಆಕ್ಯುಪೆಂಚರ್, ಫಿಸಿಯೋ ತೆರಪಿಯಂಥ ಕೋರ್ಸ್‌ಗಳ ತರಬೇತಿ ನೀಡಲಾಗುತ್ತದೆ. ಜೊತೆಗೆ 9 ನೇ ತರಗತಿ ಮೇಲ್ಪಟ್ಟ ವಿದ್ಯಾರ್ಥಿಗಳಿಗೆ ವಸತಿ ವ್ಯವಸ್ಥೆ ಸಹಿತ ಅನುಕೂಲ ಮಾಡಿಕೊಡಲಾಗುತ್ತದೆ. ಈ ವಿವಿಗೆ 19ನೇ ಶತಮಾನದ ಅಂಧ ಕವಿ ಭೀಮಾ ಬೋಯ್ ಅವರ ಹೆಸರಿಡಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ವೆಬ್ ಡೆಸ್ಕ್
ಫೋಕಸ್ ಕರ್ನಾಟಕ
ನಿಮ್ಮ ಪ್ರತಿಕ್ರಿಯೆ ಏನು?






