ಸಿಎಂ ಬದಲಾವಣೆ ವಿಚಾರದಲ್ಲಿ ಹೈಕಮಾಂಡ್ ತೀರ್ಮಾನವೇ ಅಂತಿಮ. ನಮ್ಮದೇನೂ ಇಲ್ಲ: ಸಿದ್ದರಾಮಯ್ಯ

ಮೈಸೂರು: ಸಿಎಂ ಬದಲಾವಣೆ ವಿಚಾರದಲ್ಲಿ ಹೈಕಮಾಂಡ್ ತೀರ್ಮಾನವೇ ಅಂತಿಮ. ನಮ್ಮದೇನೂ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಪೂರ್ಣಾವಧಿ ಸಿಎಂ ವಿಚಾರದಲ್ಲಿ ಹೈಕಮಾಂಡ್ ತೀರ್ಮಾನವೇ ಅಂತಿಮ. ನಮ್ಮದೇನೂ ಇಲ್ಲ ಎಂದರು.
ಇನ್ನೂ ಕೇಂದ್ರ ಬಜೆಟ್ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿ, ಈ ಬಾರಿಯ ಕೇಂದ್ರ ಬಜೆಟ್‌ನಿಂದ ನಾವು ಏನೂ ನಿರೀಕ್ಷೆ ಮಾಡುವುದಿಲ್ಲ. ಅವರು ಕೇಳಿದ್ದನ್ನು ಕೊಡುವುದಿಲ್ಲ. ಜೊತೆಗೆ ಬಜೆಟ್ನಲ್ಲಿ ಘೋಷಣೆ ಮಾಡಿದ್ದನ್ನೂ ಸಹ ಕೊಡುವುದಿಲ್ಲ.
ಈ ಹಿಂದೆ ಕೃಷ್ಣ ಮೇಲ್ಡಂಡೆ ಯೋಜನೆಗೆ ಹಣ ಕೊಡುತ್ತೇವೆ ಎಂದು ಹೇಳಿದ್ದರು. ಆದರೆ ಏನೂ ಕೊಡಲಿಲ್ಲ, ಜೊತೆಗೆ ನಮ್ಮ ತೆರಿಗೆ ಹಣದ ಪಾಲನ್ನು ಸಹ ನಮಗೆ ಸರಿಯಾಗಿ ಕೊಟ್ಟಿಲ್ಲ. ರಾಜ್ಯಕ್ಕೆ ಅನ್ಯಾಯವಾಗುತ್ತಿದೆ" ಎಂದು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ನಿಮ್ಮ ಪ್ರತಿಕ್ರಿಯೆ ಏನು?






