ಸಿಎಂ ಸಿದ್ದರಾಮಯ್ಯ ಗೆ ಮತ್ತೊಂದು ಸಂಕಷ್ಟ: ಸಿಬಿಐಗೆ ಪ್ರಕರಣ ವರ್ಗಾವಣೆ ಮಾಡುವಂತೆ ಅರ್ಜಿ ಸಲ್ಲಿಕೆ

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದ ಭೂಮಿ ಹಂಚಿಕೆ ಹಗರಣದಲ್ಲಿ ನ್ಯಾಯಾಲಯ ಸೂಚಿಸಿದ ಸೆಕ್ಷನ್‌ಗಳ ಅಡಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಪತ್ನಿ ವಿರುದ್ಧ ಮೈಸೂರು ಲೋಕಾಯುಕ್ತ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.
ಇದರ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಸಂಕಷ್ಟ ಶುರುವಾಗಿದೆ. ಮುಡಾ ಹಗರಣವನ್ನು ಸಿಬಿಐ ತನಿಖೆಗೆ ವರ್ಗಾಯಿಸುವಂತೆ ಇಂದು ದೂರುದಾರ ಸ್ನೇಹಮಯಿ ಕೃಷ್ಣ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ. ಸಿಬಿಐ ತನಿಖೆಗೆ ವರ್ಗಾಯಿಸುವಂತೆ ಮನವಿ ಮಾಡಿದ್ದು, ಸೋಮವಾರ ಅರ್ಜಿ ವಿಚಾರಣೆಗೆ ಬರಲಿದೆ.
ನಿಮ್ಮ ಪ್ರತಿಕ್ರಿಯೆ ಏನು?






