'ಸಿಕಂದರ್' ಸಿನಿಮಾ ರಿಲೀಸ್ ಗೆ ಕೌಂಟ್ ಡೌನ್: ಗೆಲುವಿನ ನಿರೀಕ್ಷೆಯಲ್ಲಿ ಸಲ್ಲು!
ಬಾಲಿವುಡ್ ಸ್ಟಾರ್ ಸಲ್ಮಾನ್ ಖಾನ್ ಹಾಗೂ ಕೊಡಗಿನ ಬೆಡಗಿ, ನ್ಯಾಷನಲ್ ಕ್ರಷ್ ರಶ್ಮಿಕಾ ಮಂದಣ್ಣ ಅವರ ಬಹುನಿರೀಕ್ಷಿತ ಸಿನಿಮಾ ಸಿಖಂದರ್ ರಿಲೀಸ್ ಗೆ ಕೌಂಟ್ ಡೌನ್ ಶುರುವಾಗಿದೆ.
ಇದೇ ಮಾ.30ರಂದು ‘ಸಿಕಂದರ್’ ಸಿನಿಮಾ ರಿಲೀಸ್‌ಗೆ ಸಜ್ಜಾಗಿದ್ದು, ಸಲ್ಮಾನ್ ಖಾನ್ ಅವರು ಗೆಲುವಿನ ನಿರೀಕ್ಷೆಯಲ್ಲಿ ಇದ್ದಾರೆ. ಗೆಲುವಿನಗಾಗಿ ನಟ ದಿಟ್ಟ ನಿರ್ಧಾರ ಕೈಗೊಂಡಿದ್ದಾರೆ. ‘ಸಿಕಂದರ್’ಗಾಗಿ ಸೌತ್ ನಿರ್ದೇಶಕ, ಕಲಾವಿದರ ಜೊತೆ ಅವರು ಕೈಜೋಡಿಸಿದ್ದಾರೆ. ಈ ಬಾರಿ ಲಕ್ಕಿ ನಟಿ ರಶ್ಮಿಕಾ ಮಂದಣ್ಣ ಸಾಥ್ ನೀಡಿದ್ದಾರೆ. ಹಾಗಾಗಿ ಈ ಚಿತ್ರದ ಮೂಲಕ ಸಕ್ಸಸ್ ಸಿಗಲಿದೆ ಎಂಬ ನಿರೀಕ್ಷೆಯಲ್ಲಿ ಸಲ್ಮಾನ್ ಇದ್ದಾರೆ.
ಭ್ರಷ್ಟ ರಾಜಕೀಯದ ವಿರುದ್ಧ ಹೋರಾಡುವ ವ್ಯಕ್ತಿಯಾಗಿ ಸಲ್ಮಾನ್ ನಟಿಸಿದ್ದಾರೆ. ಮಗಧೀರ ನಟಿ ಕಾಜಲ್ ‘ಬಾಹುಬಲಿ’ ಖ್ಯಾತಿಯ ಕಟ್ಟಪ್ಪ, ಕನ್ನಡದ ನಟ ಕಿಶೋರ್ ಸೇರಿದಂತೆ ಅನೇಕರು ನಟಿಸಿದ್ದಾರೆ. ಈಗಾಗಲೇ ಚಿತ್ರದ ಟ್ರೈಲರ್ ಹಾಗೂ ಹಾಡುಗಳಿಗೆ ಉತ್ತಮ ರೆಸ್ಪಾನ್ಸ್ ಸಿಕ್ಕಿದೆ
ನಿಮ್ಮ ಪ್ರತಿಕ್ರಿಯೆ ಏನು?