ಸಿ.ಟಿ ರವಿ ಅ ಪದ ಬಳಸಿದ್ದು ಸತ್ಯ, ಆ ಮಾತು ಕ್ರಿಮಿನಲ್ ಅಪರಾಧ: ಸಿಎಂ ಸಿದ್ದರಾಮಯ್ಯ

ಕಲಬುರಗಿ: ಸಿ.ಟಿ ರವಿ ಅ ಪದ ಬಳಸಿದ್ದು ಸತ್ಯ, ಆ ಮಾತು ಕ್ರಿಮಿನಲ್ ಅಪರಾಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಕಲಬುರಗಿ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಸಿ.ಟಿ.ರವಿ ಬಳಸಿದ ಪದ ಅತ್ಯಂತ ಅನಾಗರಿಕವಾದದ್ದು.
ಇದು ಕ್ರಿಮಿನಲ್ ಅಪರಾಧ. ಬಿಜೆಪಿಯ ರಾಷ್ಟ್ರೀಯ ಪದಾಧಿಕಾರಿ ಆಗಿದ್ದ ರವಿ ಬಾಯಲ್ಲಿ ಇಂಥಾ ಮಾತು ನಾಚಿಕೆಗೇಡಿನದ್ದು. ಇತರೆ ವಿಧಾನ ಪರಿಷತ್ ಸದಸ್ಯರು ರವಿ ಆ ಪದ ಬಳಸಿರುವುದನ್ನು ಕೇಳಿಸಿಕೊಂಡಿದ್ದಾರೆ. ರವಿ ಅತ್ಯಂತ ತುಚ್ಚವಾಗಿ ಮಾತಾಡಿರುವುದು ಸತ್ಯ ಎಂದು ಒಪ್ಪಿಕೊಂಡಿದ್ದಾರೆ ಎಂದು ತಿಳಿಸಿದರು.
ತೊಗರಿ ಪ್ಯಾಕೇಜ್
ಜಯದೇವ ಮಹತ್ವದ ಹೆಜ್ಜೆ
ನಿಮ್ಮ ಪ್ರತಿಕ್ರಿಯೆ ಏನು?






