ಸಿ.ಟಿ.ರವಿ ಅಶ್ಲೀಲ ಪದ ಬಳಸಿದ್ದರೆ ಅದನ್ನು ನಾನು ಸಹ ಒಪ್ಪುವುದಿಲ್ಲ: ಹೆಚ್.ಡಿ ಕುಮಾರಸ್ವಾಮಿ

ನವದೆಹಲಿ: ಸಿ.ಟಿ.ರವಿ ಅಶ್ಲೀಲ ಪದ ಬಳಸಿದ್ದರೆ ಅದನ್ನು ನಾನು ಸಹ ಒಪ್ಪುವುದಿಲ್ಲ ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ. ಈ ಬಗ್ಗೆ ಮಾಧ್ಯಮ ಹೇಳಿಕೆ ನೀಡಿರುವ ಕೇಂದ್ರ ಸಚಿವರು, ಸಚಿವೆ ಬಗ್ಗೆ ಸಿ.ಟಿ.ರವಿ ಅವರು ಅಶ್ಲೀಲ ಪದ ಬಳಸಿದ್ದರೆ ಅದನ್ನು ನಾನು ಸಹ ಸಮರ್ಥಿಸುವುದಿಲ್ಲ. ಅದಕ್ಕೆ ಪ್ರತಿಯಾಗಿ ಸಚಿವೆ ವರ್ತಿಸಿದ ರೀತಿ, ಅವರ ಬೆಂಬಲಿಗರ ಗೂಂಡಾಗಿರಿ ಅತಿರೇಖದ್ದು ಎಂದು ಕಿಡಿಕಾರಿದ್ದಾರೆ.
ಕರ್ನಾಟಕದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ ಎನ್ನುವುದು ನನ್ನ ಅನುಮಾನ. ಪ್ರತಿಪಕ್ಷ ನಾಯಕರಿಗೇ ರಕ್ಷಣೆ ಇಲ್ಲ ಅಂದ್ಮೇಲೆ ವಿಧಾನಮಂಡಲದಲ್ಲಿ ಯಾರ ಭಾವಚಿತ್ರ ಹಿಡಿದರೇನು ಫಲ? ವಿಧಾನ ಪರಿಷತ್ ಸದಸ್ಯರಾದ ಸಿ.ಟಿ ರವಿ ಅವರ ಮೇಲೆ ಸುವರ್ಣಸೌಧದಲ್ಲಿಯೇ ಹಲ್ಲೆ ಯತ್ನ ನಡೆದಿರುವುದು ಖಂಡನೀಯ ಎಂದು ಅವರು ಹೇಳಿದ್ದಾರೆ.
ನಿಮ್ಮ ಪ್ರತಿಕ್ರಿಯೆ ಏನು?






