ಸಿದ್ದರಾಮಯ್ಯ ಬೆಂಕಿ ಇದ್ದಂತೆ, ಮುಟ್ಟಿದ್ರೆ ಭಸ್ಮ ಆಗ್ತಾರೆ: ಸಚಿವ ಜಮೀರ್ ಅಹ್ಮದ್

ಬಳ್ಳಾರಿ: ಸಿದ್ದರಾಮಯ್ಯ ಬೆಂಕಿ ಇದ್ದಂತೆ, ಮುಟ್ಟಿದ್ರೆ ಭಸ್ಮ ಆಗ್ತಾರೆ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ಸಿಎಂ ಪರ ಬ್ಯಾಟಿಂಗ್ ಮಾಡಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಖುರ್ಚಿ ಮುಟ್ಟೋಕೆ ಸಾಧ್ಯ ಏನ್ರಿ? ಅದೊಂಥರ ಬೆಂಕಿ ಅದು, ಬೆಂಕಿ ಮುಟ್ಟಿದ್ರೆ ಸುಟ್ಟೋಗ್ತಾರೆ.
ಸಿದ್ದರಾಮಯ್ಯ ಬೆಂಕಿ ಇದ್ದಂತೆ, ನಾವು ಟಗರು ಅಂತೀವಿ. ಆ ಬೆಂಕಿ ಮುಟ್ಟೋಕೆ ಸಾಧ್ಯವಿಲ್ಲ, ಮುಟ್ಟಿದ್ರೆ ಭಸ್ಮ ಆಗ್ತಾರೆ ಎಂದು ಎದುರಾಳಿಗಳಿಗೆ ಎಚ್ಚರಿಕೆ ನೀಡಿದ್ದಾರೆ.ಇನ್ನೂ ಸಿಎಂ, ಕೆಪಿಸಿಸಿ ಸ್ಥಾನ ಖಾಲಿ ಇಲ್ಲ. ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆ ಶಿವಕುಮಾರ್ ಇದ್ದಾರೆ. ಸಿಎಂ ಸ್ಥಾನದಲ್ಲಿ ಸಿದ್ದರಾಮಯ್ಯ ಇದ್ದಾರೆ. ಖಾಲಿ ಇದ್ರೆ ತಾನೇ ಚರ್ಚೆ ಎಂದು ಹೇಳಿದ್ದಾರೆ.
ನಿಮ್ಮ ಪ್ರತಿಕ್ರಿಯೆ ಏನು?






