ಸಿದ್ಧಾರ್ಥ್ ವಿಹಾರ್ ಟ್ರಸ್ಟ್ʼಗೆ 5 ಎಕರೆ ಭೂಮಿ ವಿವಾದ: KIADB ನೀಡಿದ್ದ ಭೂಮಿ ವಾಪಸ್!

ಬೆಂಗಳೂರು: ಮೈಸೂರು ನಗರ ಅಭಿವೃದ್ಧಿ ಪ್ರಾಧಿಕಾರ ನಿವೇಶನ ಹಗರಣದ ಆರೋಪಿ ಸಿಎಂ ಸಿದ್ದರಾಮಯ್ಯ ಅವರು ಇದೀಗ ತಾವು ಪಡೆದಿದ್ದ 14 ಸೈಟುಗಳನ್ನು ಸರ್ಕಾರಕ್ಕೆ ವಾಪಸ್ ಕೊಟ್ಟಿದ್ದಾರೆ. ಇದರ ಬೆನ್ನಲ್ಲಿಯೇ ಭಾರತೀಯ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಕುಟುಂಬದಿಂದಲೂ ಸರ್ಕಾರದ ಭೂಮು ಹಂಚಿಕೆಯಲ್ಲಿ ಹಗರಣ ಮಾಡಿದೆ ಎಂದು ಬಿಜೆಪಿ ನಾಯಕ ಎನ್.ಆರ್. ರಮೇಶ್ ಅವರು ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಇದರ ಬೆನ್ನಲ್ಲಿಯೇ ಲೋಕಾಯುಕ್ತ ಇಲಾಖೆಯಿಂದ ತನಿಖೆ ಆರಂಭಿಸುವ ಮುನ್ನವೇ ಮಲ್ಲಿಕಾರ್ಜುನ ಖರ್ಗೆ ಕುಟುಂಬದಿಂದಲೂ 5 ಎಕರೆ ಭೂಮಿಯನ್ನು ಕೆ.ಎ.ಎ.ಡಿ.ಬಿ ಸಂಸ್ಥೆಗೆ ಭೂಮಿ ವಾಪಸ್ ನೀಡಲಾಗಿದೆ.
ಮಲ್ಲಿಕಾರ್ಜುನ ಖರ್ಗೆ ಕುಟುಂಬದವರು ನಡೆಸುತ್ತಿರುವ ಸಿದ್ಧಾರ್ಥ್ ಟ್ರಸ್ಟ್‌ನಿಂದ ಒಂದೇ ಕಾರಣಕ್ಕೆ, ಒಂದೇ ಸಂಸ್ಥೆಯಿಂದ ಎರಡು ಬಾರಿ ಸರ್ಕಾರಿ ಭೂಮಿಯನ್ನು ಪಡೆದುಕೊಳ್ಳಲಾಗಿದೆ ಎಂದು ಬಿಜೆಪಿ ನಾಯಕ ಹಾಗೂ ಬಿಬಿಎಂಪಿ ಮಾಜಿ ಕಾರ್ಪೊರೇಟರ್ ಎನ್.ಆರ್. ರಮೇಶ್ ಅವರು ಲೋಕಯುಕ್ತ ಇಲಾಖೆಗೆ ದೂರು ನೀಡಿದ್ದರು. ಈ ಪ್ರಕರಣದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಅವರ ಕುಟುಂಬಸ್ಥರು, ಇಬ್ಬರು ಸಚಿವರು ಹಾಗೂ ಹಿರಿಯ IAS ಅಧಿಕಾರಿ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿತ್ತು.
ಸಿದ್ಧಾರ್ಥ ವಿಹಾರ ಟ್ರಸ್ಟ್‌ನ ಸದಸ್ಯರಾದ ಖರ್ಗೆ ಕುಟುಂಬದ ಮಲ್ಲಿಕಾರ್ಜುನ ಖರ್ಗೆ, ಸಚಿವ ಪ್ರಿಯಾಂಕ ಖರ್ಗೆ, ರಾಹುಲ್ M. ಖರ್ಗೆ, ರಾಧಾಬಾಯಿ M. ಖರ್ಗೆ ಹಾಗೂ ಖರ್ಗೆ ಅವರ ಅಳಿಯ ರಾಧಾಕೃಷ್ಣ ವಿರುದ್ಧ ಭೂ ಕಬಳಿಕೆ ಆರೋಪ ಮಾಡಲಾಗಿತ್ತು. ಜೊತೆಗೆ, ಭೂಮಿ ಹಂಚಿಕೆ ಸಂಬಂಧ ಕೈಗಾರಿಕಾ ಸಚಿವ M.B. ಪಾಟೀಲ್ ಮತ್ತು ಐಎಎಸ್ ಅಧಿಕಾರಿ ಡಾ.ಎಸ್. ಸೆಲ್ವಕುಮಾರ್ ವಿರುದ್ಧ ಲೋಕಾಯುಕ್ತದಲ್ಲಿ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಆದರೆ, ಇದೀಗ ತನಿಖೆ ಆರಂಭಕ್ಕೂ ಮುನ್ನವೇ ಕೆಐಎಡಿಬಿಯಿಂದ ಪಡೆದಿದ್ದ ಭೂಮಿಯನ್ನು ಸಿದ್ದಾರ್ಥ ವಿಹಾರ ಟ್ರಸ್ಟ್ ನಿಂದ ವಾಪಸ್ ನೀಡಿ ಪತ್ರ ಬರೆಯಲಾಗಿದೆ.
ನಿಮ್ಮ ಪ್ರತಿಕ್ರಿಯೆ ಏನು?






