ಸಿನಿಮಾ, ಕ್ರಿಕೆಟ್ ಕ್ಷೇತ್ರದಲ್ಲಿ ಸಾಧನೆ: R ಅಶ್ವಿನ್, ಅಜಿತ್, ಬಾಲಯ್ಯಗೆ ಪದ್ಮ ಗೌರವ!

ಸಿನಿಮಾ, ಕ್ರಿಕೆಟ್ ಕ್ಷೇತ್ರಕ್ಕೆ ತಮ್ಮದೇ ಆದ ಕೊಡುಗೆ ಕೊಟ್ಟಿರುವ R ಅಶ್ವಿನ್, ಅಜಿತ್, ಬಾಲಯ್ಯಗೆ ಪದ್ಮ ಪ್ರಶಸ್ತಿ ಪ್ರಧಾನ ಮಾಡಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅಭಿನಂದಿಸಿದರು. ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಟೀಮ್ ಇಂಡಿಯಾದ ಮಾಜಿ ಕ್ರಿಕೆಟರ್ ರವಿಚಂದ್ರನ್ ಅಶ್ವಿನ್, ತಮಿಳುನಾಡಿನ ಸ್ಟಾರ್ ಅಜಿತ್ ಕುಮಾರ್, ಟಾಲಿವುಡ್ ನಟ ಬಾಲಕೃಷ್ಣ ಅವರಿಗೆ ಪ್ರಶಸ್ತಿ ದೊರೆತಿದೆ.
ಭಾರತದ ಕ್ರಿಕೆಟ್ ಕ್ಷೇತ್ರದಲ್ಲಿ ಆರ್.ಅಶ್ವಿನ್ ಅವರು ಮಾಡಿದ ಸಾಧನೆ ಗುರುತಿಸಿ ಈ ಅತ್ಯುನ್ನತ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ. ಇದೇ ವೇಳೆ ತಮಿಳುನಾಡಿನ ಸ್ಟಾರ್ ನಟ ಅಜಿತ್ ಕುಮಾರ್ ಎಸ್ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಪ್ರದ್ಮಭೂಷಣ ಪ್ರಶಸ್ತಿಯನ್ನು ಸ್ವೀಕಾರ ಮಾಡಿದ್ದಾರೆ. ಅಮರಾವತಿ ಸಿನಿಮಾ ಮೂಲಕ ತಮಿಳು ಸಿನಿಮಾ ರಂಗಕ್ಕೆ ಕಾಲಿಟ್ಟ ಅಜಿತ್ ಕುಮಾರ್ ಅವರು ಸಿನಿ ಕ್ಷೇತ್ರದಲ್ಲೇ ಅತ್ಯುನ್ನತ ಸ್ಥಾನದಲ್ಲಿ ತಮ್ಮನ್ನು ಇಂದು ಗುರುತಿಸಿಕೊಂಡಿದ್ದಾರೆ. ಕಲಾ ಕ್ಷೇತ್ರದಲ್ಲಿ ಅವರ ಮಹಾನ್ ಸಾಧನೆಗಳಿಗಾಗಿ ಭಾರತ ಸರ್ಕಾರದ ಅತ್ಯುನ್ನತ ಪ್ರಶಸ್ತಿಯಾದ ಪದ್ಮಭೂಷಣ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
ಟಾಲಿವುಡ್ನ ಹಿರಿಯ ನಟ ಹಾಗೂ ರಾಜಕಾರಣಿ ನಂದಮೂರಿ ಬಾಲಕೃಷ್ಣ ಅವರಿಗೂ ಇದೇ ವೇಳೆ ಪದ್ಮಭೂಷಣ ಪ್ರಶಸ್ತಿಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನೀಡಿದರು. ತೆಲುಗು ಸಿನಿಮಾ ಕ್ಷೇತ್ರದಲ್ಲಿ ನಂದಮೂರಿ ಬಾಲಕೃಷ್ಣ ಅವರ ಸಾಧನೆಯನ್ನು ಗುರುತಿಸಿ ದೇಶದ ಶ್ರೇಷ್ಠ ಪ್ರಶಸ್ತಿಯನ್ನು ನೀಡಲಾಗಿದೆ.
ನಿಮ್ಮ ಪ್ರತಿಕ್ರಿಯೆ ಏನು?






