ಸಿನಿಮಾ ಪ್ರಿಯರಿಗೆ ಗುಡ್‌ ನ್ಯೂಸ್: ರಾಜ್ಯದ ಚಿತ್ರಮಂದಿರಗಳಲ್ಲಿ ಏಕರೂಪ ದರ ನಿಗದಿ

ಸೆಪ್ಟೆಂಬರ್ 12, 2025 - 16:05
 0  10
ಸಿನಿಮಾ ಪ್ರಿಯರಿಗೆ ಗುಡ್‌ ನ್ಯೂಸ್: ರಾಜ್ಯದ ಚಿತ್ರಮಂದಿರಗಳಲ್ಲಿ ಏಕರೂಪ ದರ ನಿಗದಿ

ಬೆಂಗಳೂರು:-:ಸಿನಿಮಾ ಪ್ರಿಯರಿಗೆ ಗುಡ್‌ನ್ಯೂಸ್ ಸಿಕ್ಕಿದ್ದು, ರಾಜ್ಯದ ಚಿತ್ರಮಂದಿರಗಳಲ್ಲಿ ಏಕರೂಪ ದರ ನಿಗದಿ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಇನ್ಮುಂದೆ ರಾಜ್ಯದ ಮಲ್ಟಿಪ್ಲೆಕ್ಸ್‌ ಸೇರಿದಂತೆ ಎಲ್ಲಾ ಚಿತ್ರಮಂದಿಗಳಲ್ಲಿ, ಎಲ್ಲಾ ಭಾಷಯ ಚಿತ್ರಗಳಿಗೆ ಹಾಗೂ ಎಲ್ಲಾ ಪ್ರದರ್ಶನಕ್ಕೆ ಎಲ್ಲಾ ರೀತಿಯ ತೆರಿಗೆ ಹೊರತುಪಡಿಸಿ ಟಿಕೆಟ್‌ ದರ 200 ರೂ. ಮೀರದಂತೆ ಆದೇಶದಲ್ಲಿ ತಿಳಿಸಿದೆ. 75 ಆಸನಗಳು ಅಥವಾ ಅದಕ್ಕಿಂತ ಕಡಿಮೆ ಆಸನಗಳ ಪ್ರಿಮಿಯಂ ಸೌಲಭ್ಯವಿರುವ ಬಹುಪರದೆ ಚಿತ್ರ ಮಂದಿರಗಳನ್ನು ನಿಗದಿಪಡಿಸಿರುವ 200 ರೂ.ಗಳ ಗರಿಷ್ಠ ಟಿಕೆಟ್‌ ದರ ಮಿತಿಯಿಂದ ಹೊರಗಿಟ್ಟಿದೆ.

ಇನ್ನೂ ಕರ್ನಾಟಕದಲ್ಲಿ ಮಲ್ಟಿಪ್ಲೆಕ್ಸ್ ಥಿಯೇಟರ್ ಮಾಲೀಕರು ಸಿನಿಮಾಗೆ ಹೆಚ್ಚು ದರದ ಟಿಕೆಟ್ ನಿಗದಿ ಮಾಡುವ ಕಾರಣ ಜನ ಥಿಯೇಟರ್ ಗಳಿಗೆ ಬರುತ್ತಿಲ್ಲ. ಒಂದೊಂದು ಮಾಲ್ ನಲ್ಲಿ ಬೇರೆ ಬೇರೆ ರೀತಿಯ ದರವಿದೆ. ಹೀಗಾಗಿ ಟಿಕೆಟ್ ದರವನ್ನು ಕಡಿಮೆ ಮಾಡಿ ಏಕರೂಪದ ದರವನ್ನು ತರಬೇಕು ಎಂದು ಆಗ್ರಹಿಸಿ ಜನ ಮತ್ತು ಸಿನಿಮಾ ಕಲಾವಿದರು ಸಾಮಾಜಿಕ ಜಾಲತಾಣದಲ್ಲಿ ಕಳೆದ ವರ್ಷ ಆಂದೋಲನ ನಡೆಸಿದ್ದರು.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow