ಸಿನಿಮಾ ಪ್ರೇಕ್ಷಕರಿಗೆ ಬಿಗ್ ಶಾಕ್: 200 ರೂ. ಸಿನಿಮಾ ಟಿಕೆಟ್ ದರಕ್ಕೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ

ಸೆಪ್ಟೆಂಬರ್ 23, 2025 - 11:59
 0  13
ಸಿನಿಮಾ ಪ್ರೇಕ್ಷಕರಿಗೆ ಬಿಗ್ ಶಾಕ್: 200 ರೂ. ಸಿನಿಮಾ ಟಿಕೆಟ್ ದರಕ್ಕೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ

ಬೆಂಗಳೂರು: ರಾಜ್ಯದ ಮಲ್ಟಿಪ್ಲೆಕ್ಸ್ ಸೇರಿದಂತೆ ಎಲ್ಲ ಚಿತ್ರಮಂದಿರದಲ್ಲಿ ಪ್ರದರ್ಶಿಸುವ ಎಲ್ಲಾ ಭಾಷೆಯ ಚಿತ್ರಗಳಿಗೆ ಪ್ರವೇಶ ದರ 200 ರೂ. ಮಿತಿ ನಿಗದಿಗೊಳಿಸುವ ಸಂಬಂಧ ಕರಡು ತಿದ್ದುಪಡಿ ನಿಯಮ ಅಧಿಸೂಚನೆಯನ್ನು ರಾಜ್ಯ ಸರ್ಕಾರ ಪ್ರಕಟಿಸಿತ್ತು. ಆದ್ರೆ ಇದನ್ನು ಪ್ರಶ್ನಿಸಿ ಮಲ್ಟಿಪ್ಲೆಕ್ಸ್ ಹಾಗೂ ಹೊಂಬಾಳೆ ಫಿಲ್ಮ್ಸ್ ಹೈಕೋರ್ಟ್ ಮೊರೆ ಹೋಗಿತ್ತು. ಸರ್ಕಾರದ ಈ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ಕೊಟ್ಟಿದೆ. 

ಮಲ್ಟಿಪ್ಲೆಕ್ಸ್ ಸೇರಿ ರಾಜ್ಯದ ಎಲ್ಲ ಚಿತ್ರಮಂದಿರಗಳಲ್ಲಿ ಎಲ್ಲಾ ಭಾಷೆಯ ಚಲನಚಿತ್ರಗಳ ಪ್ರದರ್ಶನಕ್ಕೆ ತೆರಿಗೆ ಹೊರತುಪಡಿಸಿ ಟಿಕೆಟ್‌ ದರ ಗರಿಷ್ಠ 200 ಏಕರೂಪ ದರ ನಿಗದಿಪಡಿಸಿ ರಾಜ್ಯ ಸರ್ಕಾರ ಜಾರಿಗೆ ತಂದಿರುವ ನಿಯಮಗಳಿಗೆ ತಡೆ ನೀಡಬೇಕೆಂದು ಕೋರಿ ಅರ್ಜಿದಾರರು ಮನವಿ ಮಾಡಿದ್ದರು.

ಟಿಕೆಟ್‌ ದರ ನಿಗದಿ ಸಂಬಂಧ ಜಾರಿಗೆ ತಂದಿರುವ ‘ಕರ್ನಾಟಕ ಸಿನಿಮಾ (ನಿಯಂತ್ರಣ)(ತಿದ್ದುಪಡಿ) ನಿಯಮಗಳು-2025’ ಪ್ರಶ್ನಿಸಿ ಚಿತ್ರ ನಿರ್ಮಾಣ ಸಂಸ್ಥೆ ಹೊಂಬಾಳೆ ಫಿಲ್ಮ್ಸ್‌, ಮಲ್ಟಿಪ್ಲೆಕ್ಸ್ ಅಸೋಸಿಯೇಷನ್ ಆಫ್ ಇಂಡಿಯಾದ ಪ್ರತಿನಿಧಿ ಶುಭಂ ಠಾಕೂರ್, ಪಿವಿಆರ್ ಐನಾಕ್ಸ್ ಲಿಮಿಟೆಡ್‌ನ ಷೇರುದಾರ ಸಂತನು ಪೈ, ಕೀಸ್ಟೋನ್ ಎಂಟರ್ಟೈನ್ಮೆಂಟ್ ಹಾಗೂ ವಿ.ಕೆ. ಫಿಲ್ಮ್ಸ್‌ ತಕಾರರು ಅರ್ಜಿ ತ್ಯರ್ಥವಾಗುವವರೆಗೆ ಸರ್ಕಾರ ಜಾರಿಗೆ ತಂದಿರುವ ನಿಯಮಗಳಿಗೆ ತಡೆಯಾಜ್ಞೆ ನೀಡಬೇಕೆಂದು ಕೋರಿದ್ದರು.

ಅರ್ಜಿದಾರರು ಹಾಗೂ ಸರ್ಕಾರದ ಪರ ವಕೀಲರ ಸುದೀರ್ಘ ವಾದ-ಪ್ರತಿವಾದ ಆಲಿಸಿದ್ದ ನ್ಯಾಯಪೀಠ ಇಂದು ಮಧ್ಯಂತರ ತಡೆ ನೀಡಿ ಆದೇಶ ಪ್ರಕಟಿಸಿದೆ. ಸರ್ಕಾರ ಏಕಪಕ್ಷೀಯವಾಗಿ ನಿರ್ಧಾರ ಕೈಗೊಂಡು ದರ ನಿಗದಿ ಮಾಡಿದೆ. ಇದು ಕಾನೂನು ಬಾಹಿರ ಆದೇಶವಾಗಿದ್ದು, ನಾವು ಕೋಟ್ಯಂತರ ರೂ. ಹೂಡಿಕೆ ಮಾಡಿ ಸಿನಿಮಾ ನಿರ್ಮಾಣ ಮಾಡುತ್ತೇವೆ.

ಕಡಿಮೆ ಸೀಟುಗಳಿಗೆ ಹೆಚ್ಚಿನ ಸೌಲಭ್ಯ ನೀಡಲಾಗುತ್ತಿದೆ. ಸಿನಿಮಾ ನಿರ್ಮಿಸಲು ಸಾಕಷ್ಟು ಶ್ರಮ, ಬಂಡವಾಳ ಬೇಕಾಗುತ್ತದೆ. ಚಿತ್ರ ನಿರ್ಮಾಣ, ಪ್ರದರ್ಶನದ ಬಗ್ಗೆ ಮಾಹಿತಿ ತಿಳಿಯದೇ ಈ ನಿರ್ಧಾರ ಕೈಗೊಂಡಿದೆ ಎಂದು ಅರ್ಜಿದಾರರು ವಾದಿಸಿದ್ದರು. ಚಿತ್ರವನ್ನು ವೀಕ್ಷಿಸಬೇಕೋ ಬೇಡವೋ ಎನ್ನುವುದು ಗ್ರಾಹಕನಿಗೆ ಬಿಟ್ಟ ವಿಚಾರ. ಈ ವಿಚಾರದಲ್ಲಿ ಸರ್ಕಾರ ಮಧ್ಯಪ್ರವೇಶಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್‌ ತೀರ್ಪು ನೀಡಿದೆ ಎಂದು ಸಂಸ್ಥೆಗಳು ವಾದಿಸಿದ್ದವು.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow