ಸಿಲಿಕಾನ್ ಸಿಟಿಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಬರ್ಬರ ಹತ್ಯೆ..!

ಬೆಂಗಳೂರು: ನಗರದ ಹಲಸೂರು ಕೆರೆ ಬಳಿಯಲ್ಲಿ ಪ್ರಖ್ಯಾತ ರೌಡಿಶೀಟರ್ ಶಿವಕುಮಾರ್ ಅಲಿಯಾಸ್ ಬಿಕ್ಲು ಶಿವ (40) ಅವರನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಮೃತ ಶಿವಕುಮಾರ್ ತಮ್ಮ ನಿವಾಸದ ಮುಂದೆ ನಿಂತಿದ್ದಾಗ, ಕಾರಿನಲ್ಲಿ ಬಂದ ನಾಲ್ಕು ರಿಂದ ಐದು ಮಂದಿ ದುಷ್ಕರ್ಮಿಗಳು ಆತನ ಮೇಲೆ ದಾಳಿ ನಡೆಸಿದ್ದಾರೆ. ಮಾರಕಾಸ್ತ್ರಗಳಿಂದ ಅಟ್ಟಹಾಸಮಾಡಿ ಹತ್ಯೆಗೈದು, ನಂತರ ಸ್ಥಳದಿಂದ ಪರಾರಿಯಾಗಿದ್ದಾರೆ.
ಘಟನೆಯ ಮಾಹಿತಿ ಪಡೆದ ಭಾರತೀನಗರ ಪೊಲೀಸರು ಕೂಡಲೇ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಡಿಸಿಪಿ ಡಿ. ದೇವರಾಜ್ ಹಾಗೂ ಜಂಟಿ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಸ್ಥಳಕ್ಕೆ ಭೇಟಿ ನೀಡಿ ತನಿಖೆಯ ಪ್ರಗತಿಯನ್ನು ವೀಕ್ಷಿಸಿದ್ದಾರೆ. ಮೃತದೇಹವನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಸಂಬಂಧ ಭಾರತೀನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.
ನಿಮ್ಮ ಪ್ರತಿಕ್ರಿಯೆ ಏನು?






