ಸೂಟ್ ಕೇಸ್ʼನಲ್ಲಿ ಶವ ತುಂಬಿ ನದಿಗೆ ಎಸೆಯಲು ಯತ್ನ: ತಾಯಿ-ಮಗಳು ಅರೆಸ್ಟ್!

ಕೋಲ್ಕತ್ತಾದ ಕುಮಾರ್ತುಲಿ ಬಳಿಯ ಗಂಗಾ ನದಿಯ ಘಾಟ್‌ಗಳಲ್ಲಿ ಸೂಟ್‌ಕೇಸ್‌ನಲ್ಲಿ ಶವವನ್ನು ಎಸೆಯಲು ಯತ್ನಿಸುತ್ತಿದ್ದ ಇಬ್ಬರು ಮಹಿಳೆಯರನ್ನು ರೆಡ್ ಹ್ಯಾಂಡ್ ಆಗಿ ಬಂಧಿಸಲಾಗಿದೆ. ಹೌದು ಫಲ್ಗುಣಿ ಘೋಷ್ ಮತ್ತು ಆಕೆಯ ತಾಯಿ ಆರತಿ ಘೋಷ್ ಎಂಬ ಇಬ್ಬರನ್ನು ಬಂಧಿಸಲಾಗಿದೆ. ಮೃತದೇಹವನ್ನು ಫಲ್ಗುಣಿ ಘೋಷ್ ಅವರ ಮಾವನ ಸಹೋದರಿ ಸುಮಿತಾ ಘೋಷ್ (55) ಎಂದು ಗುರುತಿಸಲಾಗಿದೆ. ಉತ್ತರ ಕೋಲ್ಕತ್ತಾದ ಕುಮಾರ್ತುಲಿಯ ಗಂಗಾ ನದಿಯ ದಡದ ಬಳಿ ಬೆಳಗ್ಗೆ 8 ಗಂಟೆ ಸುಮಾರಿಗೆ ಈ ಮಹಿಳೆಯರು ನೀಲಿ ಬಣ್ಣದ ಟ್ರಾಲಿ ಬ್ಯಾಗ್‌ನೊಂದಿಗೆ ಕಾಣಿಸಿಕೊಂಡಿದ್ದರು.
ಸ್ಥಳೀಯರು ಅವರ ಅನುಮಾನಾಸ್ಪದ ಚಲನವಲನವನ್ನು ಗಮನಿಸಿ ಅವರ ಬಳಿ ಕೇಳಿಯೇ ಬಿಡಬೇಕು ಎಂದು ನಿರ್ಧರಿಸಿದರು. ಆರಂಭದಲ್ಲಿ ಮಹಿಳೆಯರು ಬ್ಯಾಗ್ ತೆರೆಯಲು ನಿರಾಕರಿಸಿದರು. ಆಮೇಲೆ ಗಟ್ಟಿ ಧ್ವನಿಯಲ್ಲಿ ಕೇಳಿದ ಬಳಿಕ ತಮ್ಮ ಸಾಕು ನಾಯಿ ಸತ್ತು ಹೋಗಿತ್ತು ಅದರ ದೇಹವನ್ನು ನೀರಿನಲ್ಲಿ ಹಾಕಲು ತೆಗೆದುಕೊಂಡು ಹೋಗುತ್ತಿರುವುದಾಗಿ ಹೇಳಿದರು. ಇದು ಮತ್ತಷ್ಟು ಅನುಮಾನಕ್ಕೆ ಕಾರಣವಾಯಿತು, ಏನೇ ಆದರೂ ಬ್ಯಾಗ್ನ ಜಿಪ್ ತೆಗೆಯಲು ಸಿದ್ಧರಿರಲಿಲ್ಲ.
ಈ ಮಧ್ಯೆ, ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದಾಗ ಪೊಲೀಸರು ಸ್ಥಳಕ್ಕೆ ಬಂದರು. ಟ್ರಾಲಿ ಬ್ಯಾಗ್ ಅನ್ನು ಬಲವಂತವಾಗಿ ತೆರೆದಾಗ ಒಳಗೆ ಮಹಿಳೆಯ ರಕ್ತಸಿಕ್ತ ಶವ ಪತ್ತೆಯಾಗಿದೆ. ನಂತರ ಇಬ್ಬರನ್ನೂ ಪೊಲೀಸ್ ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸಿ ಬಂಧಿಸಲಾಯಿತು.
ಫಲ್ಗುಣಿ ಹೇಳಿಕೆಯ ಪ್ರಕಾರ, ಮೃತ ಸುಮಿತಾ ತನ್ನ ಮಾವನ ಸಹೋದರಿ. ಅಸ್ಸಾಂನ ಜೋರ್ಹತ್ ಮೂಲದ ಸುಮಿತಾ ತನ್ನ ಪತಿಯಿಂದ ಬೇರ್ಪಟ್ಟಿದ್ದು, ಫೆಬ್ರವರಿ 11 ರಿಂದ ಕೋಲ್ಕತ್ತಾದ ತಮ್ಮ ನಿವಾಸದಲ್ಲಿ ತಾಯಿ-ಮಗಳೊಂದಿಗೆ ವಾಸಿಸುತ್ತಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ನಿಮ್ಮ ಪ್ರತಿಕ್ರಿಯೆ ಏನು?






