ಸೆ.22ರಿಂದ ಅ.7ರ ವರೆಗೆ ಜಾತಿ ಜನಗಣತಿ ಸಮೀಕ್ಷೆ: ಸಿಎಂ ಸಿದ್ದರಾಮಯ್ಯ ಕೊಟ್ರೂ ಮಹತ್ವದ ಮಾಹಿತಿ

ಸೆಪ್ಟೆಂಬರ್ 12, 2025 - 14:06
 0  15
ಸೆ.22ರಿಂದ ಅ.7ರ ವರೆಗೆ ಜಾತಿ ಜನಗಣತಿ ಸಮೀಕ್ಷೆ: ಸಿಎಂ ಸಿದ್ದರಾಮಯ್ಯ ಕೊಟ್ರೂ ಮಹತ್ವದ ಮಾಹಿತಿ

ಬೆಂಗಳೂರು:- ಸೆ.22ರಿಂದ ಅ.7ರ ವರೆಗೆ ಜಾತಿ ಜನಗಣತಿ ಸಮೀಕ್ಷೆ ನಡೆಸಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಹಿಂದುಳಿದ ವರ್ಗಗಳ ಆಯೋಗದ ನೇತೃತ್ವದಲ್ಲಿ ಹೊಸದಾಗಿ ಜಾತಿ ಜನಗಣತಿ ನಡೆಸಲು ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ. ಸೆಪ್ಟೆಂಬರ್‌ 22ರಿಂದ ಅಕ್ಟೋಬರ್‌ 7ರ ವರೆಗೆ ಮಧುಸೂದನ್ ನಾಯಕ್ ಸಮಿತಿ ನೇತೃತ್ವದಲ್ಲಿ ಸಮೀಕ್ಷೆ ನಡೆಯಲಿದೆ. 

ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಿಎಂ, ಜಾತಿ ಜನಗಣತಿ ವರದಿ ಬಗ್ಗೆ ಸಂಪೂರ್ಣ ವಿವರಣೆ ನೀಡಿದರು. ಸಮಾಜದಲ್ಲಿ ಅನೇಕ ಜಾತಿ, ಧರ್ಮಗಳಿವೆ. ವೈರುಧ್ಯ, ಅಸಮಾನತೆ ಇದೆ. ಆದ್ರೆ ಸಂವಿಧಾನ ಎಲ್ಲರಿಗೂ ಸಮಾನ ಅವಕಾಶ, ಸಾಮಾಜಿಕ ನ್ಯಾಯ ಕೊಡಬೇಕು ಅಂತ ಹೇಳುತ್ತೆ. ಅಂಬೇಡ್ಕರ್ ಕೂಡ ಇದನ್ನೇ ಹೇಳಿದ್ದಾರೆ.

ಆರ್ಥಿಕ, ಸಾಮಾಜಿಕ, ಶೈಕ್ಷಣಿಕ, ರಾಜಕೀಯ ಅಸಮಾನತೆ ಇದೆ ಅಂತ ಅಂಬೇಡ್ಕರ್ ಹೇಳಿದ್ರು. ಈ ಪ್ರಜಾಪ್ರಭುತ್ವ ಉಳಿಯಬೇಕಾದ್ರೆ ಅಸಮಾನತೆ ಹೋಗಲಾಡಿಸಬೇಕು. ಅಸಮಾನತೆ ಇದ್ದರೆ ಅದರಿಂದ ನರಳೊ ಜನರು ಪ್ರಜಾಪ್ರಭುತ್ವದ ಸೌಧ ಧ್ವಂಸ ಮಾಡ್ತಾರೆ ಅಂತ ಹೇಳಿದ್ರು. ಹಾಗಾಗಿ ಸಮಾಜದಲ್ಲಿ ಅಸಮಾನತೆ ಉಳಿಯಲು ಅವಕಾಶ ಕೊಡಬಾರದು ಎಂದು ಸಿಎಂ ಕಿವಿಮಾತು ಹೇಳಿದರು

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow