ಸೆಮಿಫೈನಲ್ʼನಲ್ಲಿ ಸೋಲಿನ ಬೆನ್ನಲ್ಲೇ ಏಕದಿನ ಕ್ರಿಕೆಟ್ʼಗೆ ಸ್ಟೀವ್ ಸ್ಮಿತ್ ಗುಡ್ ಬೈ..!

ದುಬೈ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ 14 ವರ್ಷಗಳ ನಂತರ ಐಸಿಸಿ ಟೂರ್ನಮೆಂಟ್‌ನ ನಾಕೌಟ್ ಪಂದ್ಯದಲ್ಲಿ ಆಸ್ಟ್ರೇಲಿಯಾವನ್ನು ಸೋಲಿಸುವಲ್ಲಿ ಭಾರತ ತಂಡ ಯಶಸ್ವಿಯಾಗಿದೆ. ಈ ಹಿಂದೆ 2011 ರ ಏಕದಿನ ವಿಶ್ವಕಪ್‌ನ ಕ್ವಾರ್ಟರ್ ಫೈನಲ್‌ನಲ್ಲಿ, ಟೀಂ ಇಂಡಿಯಾ ಆಸ್ಟ್ರೇಲಿಯಾವನ್ನು ಸೋಲಿಸಿ ಸೆಮಿಫೈನಲ್ ಎಂಟ್ರಿಕೊಟ್ಟಿದಲ್ಲದೆ, ಆ ನಂತರ ನಡೆದ ಫೈನಲ್‌ನಲ್ಲಿ ಶ್ರೀಲಂಕಾವನ್ನು ಮಣಿಸಿ ಪ್ರಶಸ್ತಿಯನ್ನು ಗೆದ್ದುಕೊಂಡಿತು. ಇದೀಗ ಟೀಂ ಇಂಡಿಯಾ, ಆಸ್ಟ್ರೇಲಿಯಾವನ್ನು ಸೆಮಿಫೈನಲ್‌ನಲ್ಲಿ ಸೋಲಿಸಿ ಟೂರ್ನಿಯಿಂದ ಹೊರದಬ್ಬಿದೆ.
ಇದೀಗ ಭಾರತದ ವಿರುದ್ಧ ಆಸ್ಟ್ರೇಲಿಯಾ ಸೋತ ಬೆನ್ನಲ್ಲೇ ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್‌ಗೆ ಆಸೀಸ್ ಸ್ಟಾರ್ ಬ್ಯಾಟರ್ ಸ್ಟೀವ್ ಸ್ಮಿತ್ ನಿವೃತ್ತಿ ಘೋಷಿಸಿದ್ದಾರೆ. ಆಸ್ಟ್ರೇಲಿಯಾದ ಸ್ಟಾರ್ ಬ್ಯಾಟ್ಸ್‌ಮನ್ ಸ್ಟೀವ್ ಸ್ಮಿತ್ ಏಕದಿನ ಅಂತಾರಾಷ್ಟ್ರೀಯ ಪಂದ್ಯಗಳಿಗೆ ವಿದಾಯ ಹೇಳಿದ್ದಾರೆ. ದುಬೈನಲ್ಲಿ ನಡೆದ ಚಾಂಪಿಯನ್ಸ್ ಟ್ರೋಫಿ ಸೆಮಿಫೈನಲ್‌ನಲ್ಲಿ ಭಾರತ ವಿರುದ್ಧದ ಪಂದ್ಯದಲ್ಲಿ ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್ ತಮ್ಮ ಕೊನೆಯ ಏಕದಿನ ಪಂದ್ಯವನ್ನು ಆಡಿದರು. ಆಸ್ಟ್ರೇಲಿಯಾ ಪರ 73 ರನ್ ಗಳಿಸಿ ಸೋಲಿನ ಹಾದಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದರು.
ಕ್ರಿಕೆಟ್ ಆಸ್ಟ್ರೇಲಿಯಾ ಮಾಧ್ಯಮ ಪ್ರಕಟಣೆಯ ಪ್ರಕಾರ, ಸೆಮಿಫೈನಲ್ ಸೋಲಿನ ನಂತರ ಸ್ಮಿತ್ ತಮ್ಮ ತಂಡದ ಆಟಗಾರರಿಗೆ ‘ಏಕದಿನ ಪಂದ್ಯಗಳಿಂದ ನಿವೃತ್ತರಾಗುವುದಾಗಿ’ ಹೇಳಿದ್ದರು. ಸ್ಮಿತ್ ಟೆಸ್ಟ್ ಕ್ರಿಕೆಟ್ ಮತ್ತು ಟಿ20 ಅಂತಾರಾಷ್ಟ್ರೀಯ ಪಂದ್ಯಗಳಿಗೆ ಲಭ್ಯವಿರಲಿದ್ದಾರೆ. 35 ವಯಸ್ಸಿನ ಸ್ಮಿತ್ 170 ಏಕದಿನ ಪಂದ್ಯಗಳಲ್ಲಿ ಆಡಿದ್ದು,
43.28 ಸರಾಸರಿಯಲ್ಲಿ 5800 ರನ್ ಗಳಿಸಿದ್ದಾರೆ. 12 ಶತಕಗಳು ಮತ್ತು 35 ಅರ್ಧಶತಕಗಳನ್ನು ಬಾರಿಸಿದ್ದಾರೆ. ಆಸ್ಟ್ರೇಲಿಯಾ ಪರ ಏಕದಿನ ಪಂದ್ಯಗಳಲ್ಲಿ 12 ನೇ ಅತಿ ಹೆಚ್ಚು ರನ್ ಗಳಿಸಿದ ಆಟಗಾರರಾಗಿ ಹೊರಹೊಮ್ಮಿದ್ದಾರೆ. 2016 ರಲ್ಲಿ ನ್ಯೂಜಿಲೆಂಡ್ ವಿರುದ್ಧ 164 ರನ್ ಗಳಿಸಿದ್ದು ಅವರ ಅತ್ಯಧಿಕ ಸ್ಕೋರ್. ಲೆಗ್ ಸ್ಪಿನ್ನಿಂಗ್ ಆಲ್‌ರೌಂಡರ್ ಆಗಿ ಪಾದಾರ್ಪಣೆ ಮಾಡಿದ ಅವರು 28 ವಿಕೆಟ್‌ಗಳನ್ನು ಪಡೆದಿದ್ದಾರೆ. 90 ಕ್ಯಾಚ್‌ಗಳನ್ನು ಹಿಡಿದಿದ್ದಾರೆ.
ನಿಮ್ಮ ಪ್ರತಿಕ್ರಿಯೆ ಏನು?






