ಸೈಟ್ ತೋರಿಸುವ ನೆಪದಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ: ಬಿಲ್ಡರ್ ವಿರುದ್ಧ ಪ್ರಕರಣ ದಾಖಲು

ಅಕ್ಟೋಬರ್ 26, 2024 - 16:04
 0  30
ಸೈಟ್ ತೋರಿಸುವ ನೆಪದಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ: ಬಿಲ್ಡರ್ ವಿರುದ್ಧ ಪ್ರಕರಣ ದಾಖಲು

ಮಂಗಳೂರು:- ಸೈಟ್ ತೋರಿಸುವುದಾಗಿ ಕರೆದೊಯ್ದು ಲೈಂಗಿಕ ಕಿರುಕುಳ ಕೊಟ್ಟ ಬಿಲ್ಡರ್ ವಿರುದ್ಧ ಸಂತ್ರಸ್ತೆ ದೂರು ಕೊಟ್ಟಿದ್ದಾರೆ.  ದೂರಿನ ಅನ್ವಯ ಮಂಗಳೂರು ಮಹಿಳಾ ಠಾಣೆಯಲ್ಲಿ ಬಿಲ್ಡರ್ ರಶೀದ್ ವಿರುದ್ಧ ಎಫ್ಐಆರ್ ದಾಖಲಾಗಿದೆ.

ನಿವೇಶನ ನೋಡಲೆಂದು ಮಹಿಳೆ ಅಕ್ಟೋಬರ್​ 21ರಂದು ಬಿಲ್ಡರ್​ ರಶೀದ್ ಜೊತೆ ಕಾರಿನಲ್ಲಿ ಕುಶಾಲನಗರಕ್ಕೆ ತೆರಳಿದ್ದರು. ಮಹಿಳೆ ಹೊಟೇಲ್‌ನಲ್ಲಿ ಇಬ್ಬರಿಗೂ ಪ್ರತ್ಯೇಕ ರೂಮ್‌ ಬುಕ್‌ ಮಾಡಿದ್ದರು. ಆದರೆ ಬಿಲ್ಡರ್​ ರಶೀದ್‌ ಒಂದೇ ರೂಂನಲ್ಲಿ ಇರುವ ಇಂಗಿತ ವ್ಯಕ್ತಪಡಿಸಿದ್ದಾನೆ. ಇದಕ್ಕೆ ಒಪ್ಪದ ಮಹಿಳೆ ವಿರಾಜಪೇಟೆಯಲ್ಲಿನ ತನ್ನ ತಂಗಿಯ ಮನೆಯಲ್ಲಿ ಉಳಿದುಕೊಂಡಿದ್ದಾರೆ.

ಮರುದಿನ ಬಿಲ್ಡರ್​ ರಶೀದ್​ ಜೊತೆ ಮಹಿಳೆ ನಿವೇಶನ ನೋಡಲು ಹೋಗಿದ್ದಾರೆ. ಈ ವೇಳೆ ಬಿಲ್ಡರ್​ ರಶೀದ್‌ ಅಸಭ್ಯವಾಗಿ ವರ್ತಿಸಿದ್ದಾನೆ. ಅಲ್ಲದೇ, ದಾರಿ ಮಧ್ಯೆ ಹಣದ ಆಮಿಷ ತೋರಿಸಿ ಅತ್ಯಾಚಾರಕ್ಕೆ ಯತ್ನಿಸಿದನು ಎಂದು ಮಹಿಳೆ ಆರೋಪಿಸಿದ್ದಾರೆ. ಅಲ್ಲದೇ, ಈ ವಿಚಾರ ಯಾರಿಗಾದರು ತಿಳಿಸಿದರೇ ಹಲ್ಲೆ ಮಾಡುವುದಾಗಿ ಬೆದರಿಕೆ ಸಹ ಹಾಕಿದ್ದಾನೆ ಎಂದು ಮಹಿಳೆ ಆರೋಪಿಸಿದ್ದಾರೆ.

ವೆಬ್ ಡೆಸ್ಕ್
ಫೋಕಸ್ ಕರ್ನಾಟಕ

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow