ಸ್ನೇಹಿತರ ಜೊತೆ ಮಾತನಾಡುತ್ತಾ ಕುಳಿತಿದ್ದವನ ಮೇಲೆ ಡೆಡ್ಲಿ ಅಟ್ಯಾಕ್: ಯುವಕ ಸಾವಿಗೆ ಲವ್ ಬ್ರೇಕಪ್ ಕಾರಣವಾ?

ಜುಲೈ 26, 2025 - 21:01
 0  14
ಸ್ನೇಹಿತರ ಜೊತೆ ಮಾತನಾಡುತ್ತಾ ಕುಳಿತಿದ್ದವನ ಮೇಲೆ ಡೆಡ್ಲಿ ಅಟ್ಯಾಕ್: ಯುವಕ ಸಾವಿಗೆ ಲವ್ ಬ್ರೇಕಪ್ ಕಾರಣವಾ?

ಆನೇಕಲ್:- ಬೆಂಗಳೂರು ಹೊರವಲಯದ ಆನೇಕಲ್ ನಲ್ಲಿ ಸ್ನೇಹಿತರ ಜೊತೆ ಮಾತನಾಡುತ್ತಾ ಅಂಗಡಿ ಬಳಿ ಕುಳಿತ್ತಿದ್ದ ಯುವಕನ ಮೇಲೆ ಅಪರಿಚಿತ ಗ್ಯಾಂಗೊಂದು ಹಲ್ಲೆ ಮಾಡಿದ ಪರಿಣಾಮ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ ಘಟನೆ ಜರುಗಿದೆ. ರವಿಕುಮಾರ್ ಮೃತ ಯುವಕ. 

ರವಿಕುಮಾರ್ ರಾತ್ರಿ 9:30ರ ಸುಮಾರಿಗೆ ಸ್ನೇಹಿತರ ಜೊತೆ ವಿನಾಯಕ ನಗರ ಸುಂದರ್ ರಾಜ್ ಬಡಾವಣೆಯ ಅಂಗಡಿ ಬಳಿ ಕುಳಿತಿದ್ದ. ಈ ವೇಳೆ ಬೈಕ್‌ನಲ್ಲಿ ಬಂದ ಮೂವರು ದೊಣ್ಣೆಯಿಂದ ರವಿಕುಮಾರ್ ಮೇಲೆ ಹಲ್ಲೆ ಮಾಡಿ ಎಸ್ಕೇಪ್ ಆಗಿದ್ದಾರೆ. 

ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ರಕ್ತದ ಮಡುವಿನಲ್ಲಿ ಬಿದ್ದಿದ್ದ ಗಾಯಾಳು ರವಿಕುಮಾರ್‌ನನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ದರು. ಆದರೆ ರವಿಕುಮಾರ್ ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಅಮೆಜಾನ್‌ನಲ್ಲಿ ಕೆಲಸ ಮಾಡುತ್ತಿದ್ದ ರವಿಕುಮಾರ್ ಯುವತಿಯೊಬ್ಬಳನ್ನು ಪ್ರೀತಿ ಮಾಡುತ್ತಿದ್ದ. ಇತ್ತೀಚೆಗೆ ಅವರಿಬ್ಬರಿಗೂ ಬ್ರೇಕಪ್ ಆಗಿತ್ತು. ಇದೇ ವಿಚಾರಕ್ಕೆ ರವಿಕುಮಾರ್ ಜೊತೆಯಲ್ಲಿ ಕೆಲಸ ಮಾಡುತ್ತಿದ್ದ ಯುವತಿ ತಮ್ಮ ಮತ್ತು ಗ್ಯಾಂಗ್ ದಾಳಿ ನಡೆಸಿ ಸೇಡು ತೀರಿಸಿಕೊಂಡಿದೆ ಎನ್ನಲಾಗಿದೆ

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow