ಸ್ಮಾರ್ಟ್ ಮೀಟರ್ ಟೆಂಡರ್ ಹಗರಣದಲ್ಲಿ ಸಚಿವ ಜಾರ್ಜ್‌ಗೆ ಬಿಗ್ ರಿಲೀಫ್!

ಬೆಂಗಳೂರು:- ಸ್ಮಾರ್ಟ್ ಮೀಟರ್ ಟೆಂಡರ್ ಹಗರಣದಲ್ಲಿ ಸಚಿವ ಜಾರ್ಜ್‌ಗೆ ಬಿಗ್ ರಿಲೀಫ್ ಸಿಕ್ಕಿದೆ. ಸ್ಮಾರ್ಟ್ ಮೀಟರ್ ಟೆಂಡರ್‌ನಲ್ಲಿ 16 ಸಾವಿರ ಕೋಟಿ ರೂ. ಅಕ್ರಮ ಆರೋಪದಲ್ಲಿ ಸಚಿವ ಕೆಜೆ ಜಾರ್ಜ್ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ. ಎಸ್, ಪ್ರಕರಣದಲ್ಲಿ ಸಚಿವ ಕೆ.ಜೆ.ಜಾರ್ಜ್ ವಿರುದ್ಧ ನಡೆಸಿದ ತನಿಖಾ ವರದಿಯನ್ನು ಕೋರ್ಟ್ ಸಲ್ಲಿಸಲು ಲೋಕಾಯುಕ್ತ ಪೊಲೀಸರಿಗೆ ನಿರ್ದೇಶನ ನೀಡಿ, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ಮಾಡಿತ್ತು. ಇದನ್ನು ಪ್ರಶ್ನಿಸಿ, ಸಚಿವ ಕೆಜೆ ಜಾರ್ಜ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.
ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಲೋಕಾಯುಕ್ತ ಎಸ್ಪಿ ಹಾಗೂ ದೂರುದಾರರಾದ ಬಿಜೆಪಿ ನಾಯಕರಾದ ಸಿಎನ್ ಅಶ್ವಥ್ ನಾರಾಯಣ್, ಎಸ್ ಆರ್ ವಿಶ್ವನಾಥ್, ಧೀರಜ್ ಮುನಿರಾಜು ಅವರಿಗೆ ನೋಟಿಸ್ ನೀಡಿದೆ.
ಲೋಕಾಯುಕ್ತ ಪೊಲೀಸರಿಂದ ವರದಿ ನೀಡುವಂತೆ ವಿಚಾರಣಾಧೀನ ನ್ಯಾಯಾಲಯ ಮಾಡಿರುವ ಆದೇಶಕ್ಕೆ ತಡೆ ನೀಡಿ ಹೈಕೋರ್ಟ್ ಎರಡು ವಾರ ವಿಚಾರಣೆ ಮುಂದೂಡಿದೆ.
ಏನಿದು ಹಗರಣ:-
ಬೆಸ್ಕಾಂ ಮತ್ತು ಇತರ ಎಸ್ಕಾಂಗಳ ಸ್ಮಾರ್ಟ್ ಮೀಟರ್ ಟೆಂಡರ್‍ನಲ್ಲಿ ಸುಮಾರು 15,568 ಕೋಟಿ ರೂಪಾಯಿಯ ಬೃಹತ್ ಪ್ರಮಾಣದ ಅವ್ಯವಹಾರ ನಡೆದಿದೆ ಎಂದು ಬಿಜೆಪಿ ಶಾಸಕ ಅಶ್ವತ್ಥ ನಾರಾಯಣ ಆರೋಪ ಮಾಡಿದ್ದಾರೆ. ಇದೊಂದು ಹಗಲುದರೋಡೆ; ಸರಕಾರ ಇದಕ್ಕೆ ಉತ್ತರ ಕೊಡಬೇಕು. ಸ್ಮಾರ್ಟ್ ಮೀಟರ್ ಕಡ್ಡಾಯ ಮಾಡಲು ಕಾನೂನಿಲ್ಲದೇ ಅದನ್ನು ಕಡ್ಡಾಯ ಮಾಡುತ್ತಿದ್ದಾರೆ. ಬ್ಲ್ಯಾಕ್ ಲಿಸ್ಟ್ ಆದವರಿಗೆ ಕೊಡಲಾಗಿದೆ ಎಂದು ದೂರಿದರು. ಸತ್ಯವನ್ನು ಹೇಳಿದ್ದೇವೆ. ಇದು ರಾಜಕೀಯ ಪ್ರೇರಿತ ಅಲ್ಲ ಎಂದು ಸ್ಪಷ್ಟಪಡಿಸಿದರು. ಸರಕಾರ ಕ್ರಮ ಕೈಗೊಳ್ಳದೇ ಇದ್ದಲ್ಲಿ ಸಮರ್ಪಕವಾಗಿ ಬಿಸಿ ಮುಟ್ಟಿಸುವುದಾಗಿ ಎಚ್ಚರಿಸಿದ್ದರು.
ನಿಮ್ಮ ಪ್ರತಿಕ್ರಿಯೆ ಏನು?






