ಸ್ಯಾಂಡಲ್ ಕ್ವೀನ್ vs ದರ್ಶನ್ ಫ್ಯಾನ್ಸ್ ವಾರ್: ರಮ್ಯಾ ವಿರುದ್ಧ ಕಾನೂನು ಸಮರಕ್ಕೆ ಸಜ್ಜಾದ ವಿಜಯಲಕ್ಷ್ಮಿ!?

ಸ್ಯಾಂಡಲ್ವುಡ್ ಸ್ಟಾರ್ ನಟಿ ರಮ್ಯಾ ಕೆಟ್ಟ ಕೆಟ್ಟ ಮೆಸೇಜ್ ಮಾಡುವವರ ವಿರುದ್ಧ ಸಿಡಿದೆದ್ದಿದ್ದಾರೆ. ನಿನ್ನೆ ನಟಿ ರಮ್ಯಾ ಅವರು ಇನ್ಸ್ಟಾಗ್ರಾಮ್ ಖಾತೆಯಲ್ಲಿ ಎಲ್ಲಾ ಡಿಬಾಸ್ ಅಭಿಮಾನಿಗಳಿಗೆ ನನ್ನ ಇನ್ಸ್ಟಾಗ್ರಾಂಗೆ ಸ್ವಾಗತ. ರೇಣುಕಾಸ್ವಾಮಿ ಅವರ ಕುಟುಂಬಕ್ಕೆ ಯಾಕೆ ನ್ಯಾಯ ಸಿಗಬೇಕು ಅನ್ನೋದಕ್ಕೇ ನಿಮ್ಮ ಕಾಮೆಂಟ್ಸ್‌ಗಳೇ ಸಾಕ್ಷಿ ಎಂದು ಪೋಸ್ಟ್ ಹಾಕಿದ್ದರು.
ಇದೀಗ ದರ್ಶನ್ ಪತ್ನಿ ನಟಿ ರಮ್ಯಾ ವಿರುದ್ಧ ಕಾನೂನು ಸಮರಕ್ಕೆ ಸಜ್ಜಾಗಿದ್ದಾರೆ ಎನ್ನಲಾಗಿದೆ. ಕೋರ್ಟ್ ಅಲ್ಲಿ ಇನ್ನೂ ಪ್ರಕರಣ ಇತ್ಯರ್ಥ ಆಗಿಲ್ಲ. ಆಗಲೇ ದರ್ಶನ್ ಅನ್ನು ದೋಷಿ ಎಂದು ಹೇಳುತ್ತಿದ್ದಾರೆ. ಕೋರ್ಟ್ ಅಲ್ಲಿ ಇರುವ ಪ್ರಕರಣಕ್ಕೆ ರಮ್ಯಾ ಕಾಮೆಂಟ್ ಮಾಡಿದ್ದು ಸರಿಯಲ್ಲ. ರಮ್ಯಾ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳುವಂತೆ ದರ್ಶನ್ ಪತ್ನಿ ವಿಜಯಲಕ್ಷ್ಮಿ ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ದೂರು ನೀಡಲು ಮುಂದಾಗಿದ್ದಾರೆ.
ಇನ್ಸ್ಟಾಗ್ರಾಂನಲ್ಲಿ ರಮ್ಯಾ ದರ್ಶನ್ ವಿರುದ್ಧ ಪೋಸ್ಟ್ ಹಾಕಿ ರೇಣುಕಾಸ್ವಾಮಿಗೆ ನ್ಯಾಯ ಸಿಗಲಿದೆ ಎಂದು ಬರೆದುಕೊಂಡಿದ್ದರು. ಈ ಹಿನ್ನೆಲೆ ಇಂದು ಮಧ್ಯಾಹ್ನದ ವೇಳೆಗೆ ವಿಜಯಲಕ್ಷ್ಮಿ ನಟಿ ರಮ್ಯಾ ವಿರುದ್ಧ ದೂರು ನೀಡಲಿದ್ದಾರೆ. ದರ್ಶನ್ ಫ್ಯಾನ್ಸ್ ವಿರುದ್ಧ ನಟಿ ರಮ್ಯಾ ಕೆಂಡಕಾರಿದ್ದಾರೆ. ದರ್ಶನ್ ಫ್ಯಾನ್ಸ್ ಸೋಗಿನಲ್ಲಿ ರಮ್ಯಾಗೆ ಅಶ್ಲೀಲ ಕಮೆಂಟ್ ಮಾಡಿದ್ದವರ ಅಕೌಂಟ್‌ಗಳನ್ನು ರಮ್ಯಾ ಬಹಿರಂಗೊಳಿಸಿದ್ದಾರೆ.
ನಿಮ್ಮ ಪ್ರತಿಕ್ರಿಯೆ ಏನು?






