ಸ್ಯಾಂಡಲ್ ವುಡ್ʼಗೆ ಮತ್ತೊಂದು ಆಘಾತ: ಖ್ಯಾತ ನಿರ್ದೇಶಕ ಎಟಿ ರಘು ನಿಧನ

ಮಾರ್ಚ್ 21, 2025 - 10:19
 0  8
ಸ್ಯಾಂಡಲ್ ವುಡ್ʼಗೆ ಮತ್ತೊಂದು ಆಘಾತ: ಖ್ಯಾತ ನಿರ್ದೇಶಕ ಎಟಿ ರಘು ನಿಧನ

ಬೆಂಗಳೂರು: ಸ್ಯಾಂಡಲ್ ವುಡ್​​ʼಗೆ ಮತ್ತೊಂದು ಆಘಾತವಾಗಿದೆ. ಖ್ಯಾತ ಕನ್ನಡ ಚಿತ್ರ ನಿರ್ದೇಶಕ ಎ.ಟಿ. ರಘು ಅವರು 76 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. 'ಮಂಡ್ಯದ ಗಂಡು' ಸೇರಿದಂತೆ 55ಕ್ಕೂ ಹೆಚ್ಚು ಚಿತ್ರಗಳನ್ನು ನಿರ್ದೇಶಿಸಿದ ಅವರು ಕನ್ನಡ ಚಿತ್ರರಂಗಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಅವರ ನಿಧನದಿಂದ ಚಿತ್ರರಂಗ ಶೋಕ ಸಾಗರದಲ್ಲಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಸಿನಿಪ್ರಿಯರು ಪ್ರಾರ್ಥಿಸಿದ್ದಾರೆ.

ತೀವ್ರ ಅನಾರೋಗ್ಯದಿಂದ ರಘು ಬಳಲುತ್ತಾ ಇದ್ದರು. ನಿರಂತರವಾಗಿ ಅವರು ಡಯಾಲಿಸಿಸ್ ಮಾಡಿಸಿಕೊಳ್ಳುತ್ತಿದ್ದರು. ಸದ್ಯ ಬೆಂಗಳೂರಿನ ಆರ್​ಟಿ ನಗರದ ಮಠದಹಳ್ಳಿಯಲ್ಲಿ ಅವರ ಪಾರ್ಥಿವ ಶರೀರ ಇಡಲಾಗಿದೆ. ಇಂದು (ಮಾರ್ಚ್ 21) ಮದ್ಯಾಹ್ನ 2 ಗಂಟೆ ಬಳಿಕ ಹೆಬ್ಬಾಳದ ಚಿತಾಗಾರದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ. ಅವರು ಪತ್ನಿ ಹಾಗೂ ಮಗಳನ್ನು ಅಗಲಿದ್ದಾರೆ.

ಎಟಿ ರಘು ಅವರು ಹುಟ್ಟಿದ್ದು ಕೊಡಗಿನಲ್ಲಿ. ಕೊಡವ ಸಮುದಾಯಕ್ಕೆ ಸೇರಿದ ಅವರು ಚಿತ್ರರಂಗದ ಬಗ್ಗೆ ಆಸಕ್ತಿ ಬೆಳೆಸಿಕೊಂಡರು. ಚಿತ್ರರಂಗದಲ್ಲಿ ನಿರ್ದೇಶಕನಾಗಿ, ನಿರ್ಮಾಪಕರನಾಗಿ, ಚಿತ್ರಕಥೆ ಬರಹಗಾರನಾಗಿ ಗುರುತಿಸಿಕೊಂಡರು. ಅವರು ಕನ್ನಡ ಮಾತ್ರವಲ್ಲದೆ ಹಿಂದಿಯಲ್ಲೂ ಸಿನಿಮಾ ನಿರ್ದೇಶನ ಮಾಡಿದ್ದಾರೆ.

 

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow