ಸ್ವಾಮೀಜಿಯಾಗಿ ಗಂಭೀರವಾಗಿರಬೇಕು, ನೀವು ಒಳ್ಳೆಯ ಪ್ರಜೆಯಲ್ಲ: ಕನ್ನೇರಿ ಶ್ರೀಗಳಿಗೆ ಸುಪ್ರೀಂ ತರಾಟೆ
ನವದೆಹಲಿ: ಲಿಂಗಾಯತ ಮಠಾಧೀಶರ ಒಕ್ಕೂಟದ ಸ್ವಾಮಿಜಿಗಳ ಅವಹೇಳನ ಮತ್ತು ಧರ್ಮದ ಹೆಸರಿನಲ್ಲಿ ವಿಭಜನೆ ಮೂಡಿಸಬಹುದಾದ ಅಸಂವಿಧಾನಿಕ ಆಶ್ಲೀಲ ಭಾಷೆ ಬಳಸಿದ ಆರೋಪದ ಹಿನ್ನಲೆ ಕನೇರಿ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮಿಜಿ 2 ತಿಂಗಳುಗಳ ಕಾಲ ವಿಜಯಪುರ ಜಿಲ್ಲೆಗೆ ಪ್ರವೇಶಿಸದಂತೆ ನಿರ್ಬಂಧಿಲಾಗಿತ್ತು. ಇದೀಗ ಈ ಸಂಬಂಧ ಜಿಲ್ಲಾ ಪ್ರವೇಶ ನಿರ್ಬಂಧ ಪ್ರಶ್ನಿಸಿ ಕನ್ನೇರಿ ಮಠದ ಕಾಡಸಿದ್ದೇಶ್ವರ ಸ್ವಾಮೀಜಿ ಸಲ್ಲಿಸಿದ್ದ ಮೇಲ್ಮನವಿಯನ್ನ ಸುಪ್ರೀಂಕೋರ್ಟ್ ವಜಾಗೊಳಿಸಿದೆ.
ಮೇಲ್ಮನವಿ ಅರ್ಜಿಯನ್ನು ನ್ಯಾಯಮೂರ್ತಿಗಳಾದ ಪಂಕಜ್ ಮಿತ್ತಲ್ ಹಾಗೂ ಪ್ರಸನ್ನ ವರಾಲೆ ಪೀಠ ವಿಚಾರಣೆ ನಡೆಸಿತು. ಸ್ವಾಮೀಜಿಯಾಗಿದ್ದುಕೊಂಡು ಕೀಳುಮಟ್ಟದ ಹೇಳಿಕೆ ನೀಡಿರುವುದು ಸರಿಯಲ್ಲ, ನೀವು ಸ್ವಾಮೀಜಿಯಾಗಿ ಗಂಭೀರವಾಗಿರಬೇಕು. ನೀವು ಒಳ್ಳೆಯ ಪ್ರಜೆಯಲ್ಲ, ಅವಹೇಳನಕಾರಿ ಭಾಷೆ ಬಳಸಿದ್ದೀರಿ, ಇದು ವಾಕ್ ಸ್ವಾತಂತ್ರ‍್ಯ ವ್ಯಾಪ್ತಿಯಲ್ಲಿಲ್ಲ ಎಂದು ಆಕ್ರೋಶ ಹೊರಹಾಕಿದೆ.
ನಿಮ್ಮ ಪ್ರತಿಕ್ರಿಯೆ ಏನು?