ಹಾಸನದಲ್ಲಿ ಹೃದಯ ಹಿಂಡ್ತಿರುವ ಹೃದಯಾಘಾತ: ಮತ್ತೋರ್ವ ಯುವಕ ಹಾರ್ಟ್ ಅಟ್ಯಾಕ್’ಗೆ ಬಲಿ!

ಹಾಸನ: ರಾಜ್ಯದಲ್ಲಿ ಹೃದಯಾಘಾತದಿಂದ ಸಾವನಪ್ಪುತ್ತಿರುವ ಪ್ರಕರಣಗಳು ಮುಂದುವರೆದಿದೆ. ಅದರಲ್ಲೂ ಹಾಸನ ಜಿಲ್ಲೆಯಲ್ಲಿ ಹೃದಯಾಘಾತದಿಂದ ಸಾವಿನ ಸರಣಿ ಮುಂದುವರಿದಿದ್ದು, ಹೃದಯಾಘಾತಕ್ಕೆ ಮತ್ತೋರ್ವ ಯುವಕ ಬಲಿಯಾಗಿರುವ ಘಟನೆ ಹಾಸನ ಜಿಲ್ಲೆ ಹೊಳೆನರಸೀಪುರ ತಾಲ್ಲೂಕಿನ ಸೋಮನಹಳ್ಳಿ ಗ್ರಾಮದಲ್ಲಿ ನಡೆದಿದೆ. ಸಂಜಯ್ (27) ಮೃತ ಯುವಕ.
ಸ್ನೇಹಿತರ ಜೊತೆ ಪಾರ್ಟಿಗೆ ಹೋಗಿದ್ದ ಸಂಜಯ್ ಸೋಮವಾರ ಸಂಜೆ ಎದೆನೋವು ಎಂದು ಸೋಮನಹಳ್ಳಿ ಪ್ರಾಥಮಿಕ ಆಸ್ಪತ್ರೆಗೆ ಹೋಗಿದ್ದ. ನಡೆಯಲೂ ಆಗದ ಸ್ಥಿತಿಯಲ್ಲಿ ಸಂಜಯ್‌ನನ್ನು ಸ್ನೇಹಿತರು ಆಸ್ಪತ್ರೆಗೆ ಕರೆದೊಯ್ದಿದ್ದರು. ಕೂಡಲೇ ವೈದ್ಯರು ಯುವಕನ ಬಿಪಿ ಪರೀಕ್ಷೆ ಮಾಡಿದ್ದರು. ಈ ವೇಳೆ 220ಕ್ಕೂ ಅಧಿಕ ಪ್ರಮಾಣದಲ್ಲಿ ಬಿಪಿ ಇದ್ದ ಬಗ್ಗೆ ಮಾಹಿತಿ ಲಭಿಸಿದೆ. ಹೆಚ್ಚಿನ ಚಿಕಿತ್ಸೆಗಾಗಿ ಬೇರೊಂದು ಆಸ್ಪತ್ರೆಗೆ ರೆಫರ್ ಮಾಡುವ ವೇಳೆಯೇ ಯುವಕ ಹಠಾತ್ ಸಾವನ್ನಪ್ಪಿದ್ದಾನೆ.
ಸಂಜಯ್ ಸಾವಿನ ಬಗ್ಗೆ ಸಂಬಂಧಿಕರು ಅನುಮಾನಾಸ್ಪದ ಸಾವು ಎಂದು ದೂರು ನೀಡಿದ್ದಾರೆ. ಪ್ರಕರಣ ಸಂಬಂಧ ಹಳ್ಳಿ ಮೈಸೂರು ಠಾಣೆಯಲ್ಲಿ ಅನುಮಾನಾಸ್ಪದ ಸಾವು ಕೇಸ್ ದಾಖಲಾಗಿದೆ. ಅಸಹಜ ಸಾವು ಪ್ರಕರಣಗಳಲ್ಲಿ ಮರಣೊತ್ತರ ಪರೀಕ್ಷೆ ನಡೆಸಲು ನಿರ್ದೇಶನ ನೀಡಿದ್ದು, ಮರಣೋತ್ತರ ಪರೀಕ್ಷೆಗಾಗಿ ಹೊಳೆನರಸೀಪುರ ತಾಲೂಕು ಆಸ್ಪತ್ರೆಗೆ ಸಂಜಯ್ ಮೃತದೇಹ ಸ್ಥಳಾಂತರಿಸಲಾಗಿದೆ.
ನಿಮ್ಮ ಪ್ರತಿಕ್ರಿಯೆ ಏನು?






